ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದೇ ಆರ್ಯ ಈಡಿಗ ಅಭಿವೃದ್ಧಿ ನಿಗಮ ಘೋಷಿಸಲು ಆದೇಶ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಭರವಸೆ ನೀಡಿದ್ದಾರೆ ಎಂದು ಶಾಸಕ ಹಾಲಪ್ಪ MLA Halappa ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಹು ವರ್ಷಗಳಿಂದ ಒತ್ತಾಯ ಕೇಳಿ ಬರುತ್ತಿತ್ತು, ಈ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಖುದ್ದು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಇಂದೇ “ಆರ್ಯ ಈಡಿಗ ಅಭಿವೃದ್ಧಿ ನಿಗಮ” ಘೋಷಿಸಲು ಆದೇಶ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
Also read: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆ ಸ್ಥಳ ಪರಿಶೀಲನೆ
ಜನರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳಿಂದ ಗೊಂದಲಕ್ಕೆ ಒಳಗಾಗಬಾರದೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post