No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರಕಾರಿ ಹುದ್ದೆಗಳನ್ನು ಬಯಸದೆ ಸ್ವತಃ ಉದ್ಯಮಿಗಳಾಗಿ: ಸಚಿವ ಮುರುಗೇಶ್ ನಿರಾಣಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2021
in ಬೆಂಗಳೂರು ನಗರ
0
ಸರಕಾರಿ ಹುದ್ದೆಗಳನ್ನು ಬಯಸದೆ ಸ್ವತಃ ಉದ್ಯಮಿಗಳಾಗಿ: ಸಚಿವ ಮುರುಗೇಶ್ ನಿರಾಣಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿದ್ಯಾವಂತರು ಕೇವಲ ಸರಕಾರಿ ಹುದ್ದೆಗಳನ್ನು ಬಯಸದೆ ಸ್ವತಃ ಉದ್ಯಮಗಳಾಗುವ ಮೂಲಕ ದೇಶದ
ಪ್ರಗತಿಯಲ್ಲಿ ಕೈ ಜೋಡಿಸಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕರೆ ನೀಡಿದ್ದಾರೆ.

ಸೋಮವಾರ ಬೆಂಗಳೂರಿನ ಅರಮನೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು, ಹಾಗೂ ಕೈಗಾರಿಕಾ ಆದಾಲತ್ ‘ಕಾರ್ಯಕ್ರಮದಲ್ಲಿ ಅವರು, ಉದ್ಘಾಟನಾ ಭಾಷಣದಲ್ಲಿ ಮಾತನಾಡಿದರು.

ಒಬ್ಬ ಯಶಸ್ವಿ ಉದ್ಯಮಿಯಾದರೆ ನೀವು ಮಾಲೀಕರಾಗಿ ಸಾವಿರಾರು ಜನರಿಗೆ ಉದ್ಯೋಗ ನೀಡಬಹುದು. ಕೇವಲ ಉದ್ಯೋಗ ಪಡೆಯುವುದೇ ನಿಮ್ಮ ¿ ಗುರಿ¿ ಯಾದರೆ ನೀವೊಬ್ಬ ಉದ್ಯೋಗಿಯಾಗಬಹುದು. ಆಯ್ಕೆ ನಿಮ್ಮದು ಎಂದು ಸಲಹೆ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರತಿಯೊಬ್ಬರನ್ನು ಸ್ವಾವಲಂಬಿ ಮಾಡಲು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, ಯುವಕರು/ ಯುವತಿಯರು ಇದರ ಸದುಪಯೋಗಮಾಡಿಕೊಂಡು ಉದ್ಯಮಗಳಾಗಿ ಎಂದು ಕಿವಿಮಾತು ಹೇಳಿದರು.

ತಮ್ಮ ಭಾಷಣದಲ್ಲಿ ಯಶಸ್ವಿ ಉದ್ಯಮಿಗಳ ಉದಾಹರಣೆಯನ್ನು ವಿವರಿಸಿದ ಅವರು, ಯಾವುದೇ ಕೆಲಸ ಮಾಡುವಾಗ ಪ್ರಾರಂಭದಲ್ಲಿ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಅವೆಲ್ಲವನ್ನೂ ಮೆಟ್ಟಿ ನಿಂತಾಗಲೇ ನಾವು ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇನ್ಫೋಸಿಸ್‍ನ ಸುಧಾ ನಾರಾಯಣ ಮೂರ್ತಿಯವರು ಹುಬ್ಬಳ್ಳಿಯ ಬಿ.ವಿ. ಎಂ ಕಾಲೇಜಿನಲ್ಲಿ ಸುಧಾ ನಾರಾಯಣಮೂರ್ತಿಯವರು ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ ಬಳಿಕ ನಾರಾಯಣ ಮೂರ್ತಿ ಅವರನ್ನು ವಿವಾಹವಾಗಿ ಉದ್ಯಮ ಆರಂಭಿಸಲು ಮುಂದಾದರು. ಆಗ ಅವರಿಗೆ ಸಾಕಷ್ಟು ಅಡೆತಡೆಗಳು ಎದುರಾದವು. ಆದರೂ ಧೃತಿಗೆಡದೆ ಇನ್ಫೋಸಿಸ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಿದರು.
ಪರಿಣಾಮ ಇಂದು 2 ಲಕ್ಷ ಉದ್ಯೋಗ ಹಾಗೂ 54 ದೇಶಗಳಲ್ಲಿ ಕಂಪನಿಗಳು ಪ್ರಾರಂಭವಾಗಿವೆ ಎಂದು ಅವರ ‘ ಯಶೋಗಾಧೆಯನ್ನು’ ತೆರೆದಿಟ್ಟರು.

ವಿಆರ್ ಎಲ್ ನ‌ ವಿಜಯ್ ಸಂಕೇಶ್ವರ ಕೂಡ ಸಣ್ಣ ಪ್ರಮಾಣದಲ್ಲಿ ಉದ್ಯಮವನ್ನು ಆರಂಭಿಸಿದರು. ಪ್ರಾರಂಭದಲ್ಲಿ ಅವರಿಗೂ ಇಂತಹ ಅನೇಕ ಸಮಸ್ಯೆಗಳೇ ಎದುರಾಗಿದ್ದವು. ಆದರೂ ಎಲ್ಲವನ್ನೂ ಎದುರಿಸಿ ದೇಶದಲ್ಲೇ ಒಬ್ಬ ಯಶಸ್ವಿ ಉದ್ಯಮಿಯಾಗಿದ್ದಾರೆ. ಸಾವಿರಾರು ಜನರಿಗೆ ಉದ್ಯೋಗ ನೀಡಿ ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ ಎಂದರು.

ವಿದ್ಯಾರ್ಥಿಗಳಿಗೆ ಇಂಥವರು ಪ್ರೇರಣೆಯಾಗಬೇಕು. ನೀವು ಕಷ್ಟಪಟ್ಟರೆ ಮುಂದೆ ಬರಲು ಸಾಧ್ಯ. ಯಾರು ಸತತ ಪರಿಶ್ರಮಪಟ್ಟು ಸವಾಲುಗಳನ್ನು ಎದುರಿಸುತ್ತಾರೋ ಅವರು ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.

ನಾವು 2010-12ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಿದ್ದವು. ಪರಿಣಾಮ 10.84 ಲಕ್ಷ ಕೋಟಿ ರೂ. ಬಂಡವಾಳ ಹಾಗೂ 15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿದ್ದವು. ಈ ವಿಶೇಷ ಕಾರ್ಯಕ್ರಮದಲ್ಲೂ ಹೆಚ್ಚಿನ ಪ್ರಮಾಣದ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂಬ ವಿಶ್ವಾಸವನ್ನು ನಿರಾಣಿ ವ್ಯಕ್ತಪಡಿಸಿದರು.

ಎಂಬಿಎ, ಬಿಬಿಎ, ಇಂಜಿನಿಯರ್ ಸೇರಿದಂತೆ ಮತ್ತಿತರ ‌ವೃತ್ತಿಪರ‌ ಕೋಸ್೯ಗಳಲ್ಲಿ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಪಠ್ಯಗಳನ್ನು ಆಳವಡಿಸುವ ಕುರಿತಾಗಿ ಸದ್ಯದಲ್ಲೇ ಸಂಬಂಧಪಟ್ಟವರ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಉದ್ಯಮಿಗಳಾಗಿ ಉದ್ಯೋಗ ಸೃಷ್ಟಿಸುವುದು ಹೇಗೆ?, ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ?. ಉದ್ಯಮ ಆರಂಭಕ್ಕೆ ಅನುಕೂಲವಾಗುವ ಸರ್ಕಾರದ ಯೋಜನೆಗಳು ಯಾವುವು? ಆರ್ಥಿಕ ನೆರವು ಹೇಗೆ?ಎಲ್ಲಿ ಪಡೆಯಬಹುದು? ಎಂಬ ಮಾಹಿತಿ ಕಾರ್ಯಕ್ರಮದಲ್ಲಿ ದೊರೆಯಲಿದೆ. ಉತ್ಸಾಹಿ ಯುವಜನರನ್ನು ಉದ್ಯಮಿಗಳಾಗಿಸಲು ಎಲ್ಲ ಅಗತ್ಯ ಮಾಹಿತಿ ಒದಗಿಸುವ ಮೂಲಕ ಸಹಾಯ ಹಸ್ತ ಚಾಚಲಿದ್ದೇವೆ ಎಂದು ಹೇಳಿದರು.

ವೈಮಾನಿಕ ಮತ್ತು ರಕ್ಷಣಾ ಕ್ಷೇತ್ರ, ಆರೋಗ್ಯ, ಶಿಕ್ಷಣ ವಿಶೇಷವಾಗಿ ಎಜು ಟೆಕ್, ಸ್ಟಾರ್ಟ್ಅಪ್ ವಲಯದಲ್ಲಿನ ಅವಕಾಶಗಳ ಬಗ್ಗೆ ಮಾಹಿತಿ ದೊರೆಯಲಿದೆ. ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ. ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇವಿಗೆ ಸಬ್ಸಿಡಿ:
ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸಬ್ಸಿಡಿ ನೀಡಲು ಚಿಂತನೆ ನಡೆಸಿದೆ. ಬ್ಯಾಟರಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಒಟ್ಟಾರೆ ವೆಚ್ಚದ ಶೇ.25ರಷ್ಟು ಅಥವಾ ಗರಿಷ್ಠ 10 ಲಕ್ಷ ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆಗೆ 2.5 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಸಬ್ಸಿಡಿ ಘೋಷಣೆ ಮಾಡಲು ಮುಂದಾಗಿದೆ ಎಂದು ಸಚಿವ ನಿರಾಣಿ ಅವರು ‌ಪ್ರಕಟಿಸಿದರು‌.

ವಿದೇಶಿ ನೇರ ಹೂಡಿಕೆ:
ಪ್ರಸಕ್ತ ಹಣಕಾಸು ವರ್ಷದ ಮೊದಲನೆಯ ತ್ರೈಮಾಸಿಕ (ಏಪ್ರಿಲ್ ನಿಂದ ಜೂನ್) ದಲ್ಲಿ 62,085 ಕೋಟಿ ರೂ. ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯ ಮೊದಲ ಸ್ಥಾನದಲ್ಲಿದೆ. 2020-21 ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ ಎಂದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ – ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 2022ರ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ‌ಸ್ಪಷ್ಟಪಡಿಸಿದರು.

ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ದೇಶ-ವಿದೇಶದಿಂದ ಹೆಚ್ಚಿನ ಬಂಡವಾಳ ಹರಿದು ಬರಲಿದೆ. ಈ ಕ್ರಾಂತಿಯಿಂದ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಈ ಸಮಾವೇಶಕ್ಕೆ ಪೂರ್ವ ತಯಾರಿಯಾಗಿ ರಾಜ್ಯದಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಲಾಗುತ್ತದೆ ಎಂದರು‌

ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದು ಯಶಸ್ವಿ ಉದ್ಯಮಿಗಳಾಗಲಿ ಎಂದು ಆಶಿಸುತ್ತೇನೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧ ಎಂದು ವಾಗ್ದಾನ ಮಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniNews in KannadaNews KannadaState Newsಬೆಂಗಳೂರುಸಚಿವ ಮುರುಗೇಶ್ ನಿರಾಣಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸುವ ಸಂಕಲ್ಪ ತೊಟ್ಟಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ

Next Post

ದಸರಾ ರಜೆ ನಂತರ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ನಾಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ದಸರಾ ರಜೆ ನಂತರ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ನಾಗೇಶ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL