ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿಕ್ಕಬಳ್ಳಾಪುರ ಸಂಸದ ಕೆ. ಸುಧಾಕರ್ #K Sudhakar ಅಭಿನಂದನಾ ಸಮಾರಂಭದಲ್ಲಿ ಮದ್ಯ, ಬಾಡೂಟಕ್ಕೆ ಜನರು ಮುಗಿಬಿದ್ದಿದ್ದು, ಈ ಕುರಿತಂತೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ನೆಲಮಂಗಲದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಸುಧಾಕರ್ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ್ದ ಜನರಿಗಾಗಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು.

Also read: ಓವರ್ ಲೋಡ್’ನಿಂದ ಅಪಘಾತಕ್ಕೀಡಾದ ಬಸ್ | 40 ಶಾಲಾ ಮಕ್ಕಳಿಗೆ ಗಂಭೀರ ಗಾಯ
ಬಾಡೂಟದ ಜೊತೆಗೆ ಮದ್ಯವನ್ನೂ ಕೂಡ ನೀಡಲಾಗಿತ್ತು. ಎಣ್ಣೆ ಪಡೆದುಕೊಳ್ಳಲು ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಈ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಅಭಿನಂದನಾ ಸಮಾರಂಭದಲ್ಲಿ ಬಾಡೂಟ ಹಾಗೂ ಮಧ್ಯ ವಿತರಣೆ ಮಾಡಿದ್ದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಆಗ್ರಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post