No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಮಾದರಿ: ಹೆಚ್.ಡಿ. ದೇವೇಗೌಡ

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಪ್ರದಾನ

kalpa News by kalpa News
December 26, 2024
in ಬೆಂಗಳೂರು ನಗರ
0
ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಮಾದರಿ: ಹೆಚ್.ಡಿ. ದೇವೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ #Atal Bihari Vajpayee ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ #H D Devegowda ಅವರು ಆಕ್ರೋಶ ವ್ಯಕ್ತಪಡಿಸಿದರು.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ.ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಅಂತೂ ಅವರು ಆರೋಪಿಸಿದರು.

ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.

ನಾನು ವಾಜಪೇಯಿ ಅವರ ಬಗ್ಗೆ ಬಹಳಷ್ಟು ಹೇಳಬಲ್ಲೆ. ನಾನು ಆಳುವ ಪಕ್ಷದ ನಾಯಕನಾಗಿದ್ದಾಗ ಅಟಲ್ ಜೀ ವಿರೋಧ ಪಕ್ಷದ ನಾಯಕರಾಗಿದ್ದರು. ನಾನು ವಿರೋಧ ಪಕ್ಷದಲ್ಲಿದ್ದಾಗ ಅವರು ನನ್ನನ್ನು ತುಂಬಾ ಗೌರವದಿಂದ ಕಾಣುತ್ತಿದ್ದರು. ಅವರ ಹಿಂದಿ ಭಾಷಣದ ಅರ್ಥ ತಿಳಿದುಕೊಳ್ಳುತ್ತಿದ್ದೆ. ಬಹಳ ಸೊಗಸಾಗಿ ಅವರು ಹಿಂದಿ ಮಾತನಾಡುತ್ತಿದ್ದರು. ನಾನು ಆಗಾಗ ಅವರ ತಮಾಷೆಗೆ ‘ಸರ್ ನಿಮ್ಮ ಹಿಂದಿಯಿಂದ ದೇಶದ ಸಮಸ್ಯೆ ಬಗೆಹರಿಯಲ್ಲ’ ಅಂತ ಹೇಳುತ್ತಿದ್ದೆ. ಅವರು ನಗುತ್ತಿದ್ದರು. ಬಹಳ ದೊಡ್ಡ ವ್ಯಕ್ತಿ, ದೂರದೃಷ್ಟಿ ಇದ್ದ ನಾಯಕ ಎಂದು ವಾಜಪೇಯಿ ಅವರ ಗುಣಗಾನ ಮಾಡಿದರು ಮಾಜಿ ಪ್ರಧಾನಿಗಳು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.
ನಾನು ವಾಜಪೇಯಿ ಅವರು ಅಧಿಕಾರದಿಂದ ಇಳಿದ ಮೇಲೆ ಅವರ ಮನೆಗೆ ಹೋಗಿದ್ದೆ. ನನ್ನ ಕಾಲದಲ್ಲಿ ಅಷ್ಟು ಕೆಲಸ ಮಾಡಲು ಆಗಿಲ್ಲ, ನೀವು ದೇಶವನ್ನು ಎಷ್ಟು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಅವರಿಗೆ ಹೇಳಿದ್ದೆ. ನಾನು ಆರ್ಡಿನರಿ ಡಿಪ್ಲೊಮಾ ಮಾಡಿದವನು, ರೈತನ ಮಗ. ನೀರನ್ನು ಹೇಗೆ ಉಳಿಸಿಕೊಳ್ಳಬೇಕು, ಬಳಸಿಕೊಳ್ಳಬೇಕು ಎಂದು ತೋರಿಸಿದೆ. ಜನ ಕೊಟ್ಟ ಶಕ್ತಿಯಿಂದ ಈ ಎಲ್ಲ ಕೆಲಸ‌ ಮಾಡಿದೆ ಎಂದು ಅವರಿಗೆ ಹೇಳಿದೆ ಎಂದು ಮಾಜಿ ಪ್ರಧಾನಿಗಳು ಅಂದಿನ ನೆನಪುಗಳನ್ನು ಸಭಿಕರ ಮುಂದೆ ಹಂಚಿಕೊಂಡರು.

ಬಿ.ಎಲ್ ಸಂತೋಷ್ ಬಗ್ಗೆ ಮಾಜಿ ಪ್ರಧಾನಿಗಳ ಮೆಚ್ಚುಗೆ:

ಸಭೆಯಲ್ಲಿ ತಮಗೂ ಮೊದಲು ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಮಾತುಗಳನ್ನು ಬಹುವಾಗಿ ಮೆಚ್ಚಿಕೊಂಡರು ಮಾಜಿ ಪ್ರಧಾನಿಗಳು.

ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ. ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಸಂತೋಷ್ ಅವರನ್ನು ಉದ್ದೇಶಿಸಿ ಮಾಜಿ ಪ್ರಧಾನಿಗಳು ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್, ಉನ್ನತ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ತಿಮ್ಮೇಗೌಡ ಅವರೂ ಇದೇ ಸಂದರ್ಭದಲ್ಲಿ ಅಟಲ್ ಪುರಸ್ಕಾರಕ್ಕೆ ಪಾತ್ರರಾದರು.

ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಉಪಸ್ಥಿತರಿದ್ದು ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Atal Bihari VajpayeeBangaloreH D DevegowdaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಂದಕಕ್ಕೆ ಉರುಳಿದ ಸೇನಾ ವಾಹನ | ಕರ್ನಾಟಕದ ಮೂವರು ಯೋಧರು ಹುತಾತ್ಮ | ಸಿಎಂ ಸಿದ್ಧರಾಮಯ್ಯ ಸಂತಾಪ

Next Post

ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL