ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊರೋನಾ ಹಾಗೂ ಓಮಿಕ್ರಾನ್ ಸೋಂಕಿನ ಹಿನ್ನಲೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ. ಯಾವುದೇ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಮಾಡಲಾಗುವುದಿಲ್ಲ. ಪರೀಕ್ಷೆಗೂ ಶೇಕಡ.75 ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಎಂದರು.
ಎಸ್’ಎಸ್’ಎಲ್’ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್’ಲೈನ್ ತರಗತಿ ಪ್ರಾರಂಭ ಆಗುವವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ.
ಬೆಂಗಳೂರಿನಲ್ಲಿ 1ನೆಯ ತರಗತಿಯಿಂದ 9ನೆಯ ತರಗತಿಯವರೆಗೆ ಶಾಲೆ ತೆರೆಯಲು ತಜ್ಞರೊಂದಿಗೆ ಚರ್ಚಿಸಲಾಗುತ್ತದೆ. ಅವರ ಸಲಹೆ ಮೇರೆಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯತೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post