ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭಾ ಚುನಾವಣೆಯ ಮುನ್ನ ಯುವ ಮತದಾರರನ್ನು ಸೆಳಯುವಂತಿರುವ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, CM Basavaraja Bommai ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ.
ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ದೊರೆಯಲಿದೆ. ಇದರಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯ ಲಾಭವಾಗಲಿದೆ.
Also read: ಬೊಮ್ಮಾಯಿ ಬಜೆಟ್’ನಲ್ಲಿ ಯಾವ ಇಲಾಖೆ, ಯಾವ ಯೋಜನೆಗೆ ಎಷ್ಟು ಅನುದಾನ ಸಿಕ್ಕಿದೆ? ಇಲ್ಲಿದೆ ಮಾಹಿತಿ
ಇನ್ನು, 9,556 ಶಾಲಾ ಕೊಠಡಿಗಳ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದ್ದು, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಯೋಜನೆ ಘೋಷಿಸಲಾಗಿದೆ. 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಮಕ್ಕಳ ಬಸ್ಸು ಯೋಜನೆಗಾಗಿ ರೂ. 100 ಕೋಟಿ ಅನುದಾನ ಮೀಸಲಿಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post