Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಒನ್ ಹೆಲ್ತ್ ಪ್ರಾಯೋಗಿಕ ಯೋಜನೆಗೆ ಅತುಲ್ ಚತುರ್ವೇದಿ ಚಾಲನೆ

June 29, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಒನ್-ಹೆಲ್ತ್ One health ಎನ್ನುವುದು ಬಹು-ವಲಯದ ವಿಧಾನವಾಗಿದ್ದು, ಅದು ಮಾನವ, ಪ್ರಾಣಿ ಮತ್ತು ಪರಿಸರದ ಆರೋಗ್ಯ, ಈ ಮೂರು ಅಂಶಗಳ ಪರಸ್ಪರ ಸಂಪರ್ಕ, ಅವಲಂಬನೆಯನ್ನು ಪರಿಗಣಿಸುತ್ತದೆ. ಕೋವಿಡ್ ಸಾಂಕ್ರಾಮಿಕದ ನಂತರ ಸಮಗ್ರ ವಿಧಾನವನ್ನು ತೆಗೆದುಕೊಳ್ಳಲು ಈ ಕಲ್ಪನೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸರ್ಕಾರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸಚಿವಾಲಯದ ಕಾರ್ಯದರ್ಶಿ ಅತುಲ್ ಚತುರ್ವೇದಿ Atul Chaturvedi ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಒನ್ ಹೆಲ್ತ್ ಪ್ರಾಯೋಗಿಕ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಕೆಪಾಸಿಟಿ ಬಿಲ್ಡಿಂಗ್ ಪ್ಲಾನ್ ಮತ್ತು ಕನ್ನಡದಲ್ಲಿ ಒನ್ ಹೆಲ್ತ್ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.
ಭಾರತದಲ್ಲಿ ಒನ್ ಹೆಲ್ತ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದ್ದು ಇದರಿಂದ ಜಾನುವಾರು, ಮಾನವ, ವನ್ಯಜೀವಿಗಳ ಆರೋಗ್ಯ ಮತ್ತು ಪರಿಸರ ಸ್ವಾಸ್ಥ್ಯವನ್ನು ಕಾಪಾಡುವ ಮತ್ತು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ಈ ಕಾರ್ಯಕ್ರಮಕ್ಕೆ ಪಶು ಸಂಗೋಪನೆ ಮತ್ತು ವನ್ಯಜೀವಿ ಇಲಾಖೆಗಳು ಸಹಭಾಗಿತ್ವವನ್ನು ಹೊಂದುವ ಮೂಲಕ ಜಾನುವಾರು ಮತ್ತು ವನ್ಯಜೀವಿಗಳ ರೋಗಗಳ ತಪಾಸಣೆ ಪ್ರಕ್ರಿಯೆಯನ್ನು ಸುಧಾರಣೆ ಮಾಡುವುದು, ಕಣ್ಗಾವಲು, ದತ್ತಾಂಶಗಳ ಸಂಗ್ರಹ ಮತ್ತು ಡಿಜಿಟಲೀಕರಣ, ಕಾರ್ಯವಿಧಾನಗಳನ್ನು ಹಂಚಿಕೊಳ್ಳುವುದು, ಸಮುದಾಯ ಸದಸ್ಯರಲ್ಲಿ ಸಂವಹನ ಮಟ್ಟವನ್ನು ಸುಧಾರಣೆ ಮಾಡುವುದು, ವನ್ಯಜೀವಿಗಳ ಆರೋಗ್ಯದ ಬಗ್ಗೆ ಗಮನಹರಿಸುವುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಸಹಭಾಗಿತ್ವ ಹೊಂದಿರುವ ಎಲ್ಲಾ ಇಲಾಖೆಗಳು ಗಮನಹರಿಸಲಿವೆ. ಈ ಯೋಜನೆಯು ನೆಟ್‌ವರ್ಕ್‌ನಲ್ಲಿ ಪ್ರಯೋಗಾಲಯಗಳನ್ನು ಬಲವರ್ಧನೆ ಮಾಡಿ ಸಂಯೋಜಿಸುತ್ತದೆ ಹಾಗು ಉದ್ದೇಶಿತ ಕಣ್ಗಾವಲು ಯೋಜನೆಯ ಅಭಿವೃದ್ಧಿಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಅಲ್ಲದೇ, ರಾಷ್ಟ್ರೀಯ ಡಿಜಿಟಲ್ ಜಾನುವಾರು ಮಿಷನ್(ಎನ್ಡಿಎಲ್ಎಂ)ನ ಡಿಜಿಟಲ್ ಆರ್ಕಿಟೆಕ್ಚರ್ನೊಂದಿಗೆ ದತ್ತಾಂಶವನ್ನು ಸಂಯೋಜನೆ ಮಾಡುತ್ತದೆ. ಕರ್ನಾಟಕದಲ್ಲಿನ ಒನ್ ಹೆಲ್ತ್ ಪ್ರಾಯೋಗಿಕ ಯೋಜನೆಯು ʼರಾಷ್ಟ್ರಮಟ್ಟದ ಒನ್ ಹೆಲ್ತ್ ವೇದಿಕೆಯನ್ನುʼ ಅನುಷ್ಠಾನಗೊಳಿಸಲು ಬುನಾದಿಯಾಗುತ್ತದೆ ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಡಾ. ಪ್ರವೀಣ್ ಮಲ್ಲಿಕ್, ಆಯುಕ್ತರು, ಭಾರತ ಸರ್ಕಾರದ ಪಶು ಸಂಗೋಪನೆ ಇಲಾಖೆ, ಅಲ್ಕೇಶ್ ವಾಧ್ವಾನಿ ನಿರ್ದೇಶಕ ಬಡತನ ನಿರ್ಮೂಲನೆ ಭಾರತ, ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್(ಬಿಎಂಜಿಎಫ್), ಸಲ್ಮಾ ಕೆ.ಫಾಹಿಮ್, ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಡಾ. ಪುಷ್ಪಲತಾ, ಪ್ರಭಾರಿ ಆರೋಗ್ಯ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ. ವಿಜಯಕುಮಾರ್ ಗೋಗಿ, ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಮತ್ತು ಡಾ. ಮಂಜುನಾಥ್ ಎಸ್. ಪಾಳೇಗಾರ್, ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಪಶುಸಂಗೋಪನೆ, ವನ್ಯಜೀವಿ ಕ್ಷೇತ್ರಗಳ ಇತರೆ ಪರಿಣತರು ಪಾಲ್ಗೊಂಡಿದ್ದರು.

Also read: ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ

ಭಾರತ ಸರ್ಕಾರದ ಪಶು ಸಂಗೋಪನೆ ಆಯುಕ್ತ ಡಾ.ಪ್ರವೀಣ್ ಮಲ್ಲಿಕ್ ಅವರು ಮಾತನಾಡಿ, “ಕರ್ನಾಟಕದಲ್ಲಿ ಒನ್ ಹೆಲ್ತ್ ಫ್ರೇಂವರ್ಕ್ ಅನ್ನು ಆರಂಭಿಸುವುದರೊಂದಿಗೆ ನಾವು ಮಾನವ, ಪರಿಸರ ಮತ್ತು ಜಾನುವಾರುಗಳ ಆರೋಗ್ಯದ ಕಡೆಗೆ ಹೆಚ್ಚು ಗಮಹರಿಸಲಿದ್ದೇವೆ. ಪ್ರಾಯೋಗಿಕ ಯೋಜನೆಯಾಗಿ ರೂಪಿಸಲಾಗಿರುವ ಆರು ವಿಭಿನ್ನವಾದ ಮಧ್ಯಸ್ಥಿಕೆಗಳು ವಲಯಗಳ ಮಧ್ಯೆ ಉತ್ತಮ ಸಮನ್ವಯ ಮತ್ತು ವಿಭಿನ್ನ ತಂಡಗಳು ಸಾಮರ್ಥ್ಯ ವೃದ್ಧಿಗೆ ಕಾರಣವಾಗುತ್ತವೆ. ರಾಜ್ಯದ ಇಲಾಖೆಗಳು ಮತ್ತು ಎಲ್ಲಾ ಪಾಲುದಾರ ಸಂಸ್ಥೆಗಳ ಬೆಂಬಲದೊಂದಿಗೆ ಪ್ರಾಯೋಗಿಕವಾಗಿ ನಾವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ ಸರ್ಕಾರದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್ ಅವರು ಮಾತನಾಡಿ, ಕರ್ನಾಟಕದಲ್ಲಿ ಒನ್ ಹೆಲ್ತ್ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ನಮಗೆ ಹೆಮ್ಮೆ ಎನಿಸುತ್ತಿದೆ. ನಮ್ಮ ರಾಜ್ಯದಲ್ಲಿ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಸುಧಾರಣೆಗೆ ನೆರವಾಗುವ ಈ ಪ್ರಾಯೋಗಿಕ ಯೋಜನೆ ದೀರ್ಘಾವಧಿವರೆಗೆ ಸಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಕರ್ನಾಟಕ ಸರ್ಕಾರದ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ ಮತ್ತು ಡಾ. ಪುಷ್ಪಲತಾ, ಪ್ರಭಾರಿ ಆರೋಗ್ಯ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ. “ರಾಜ್ಯದಲ್ಲಿ ಒನ್ ಹೆಲ್ತ್ ಫ್ರೇಂವರ್ಕ್ ಅನ್ನು ಅನುಷ್ಠಾನಕ್ಕೆ ತರುತ್ತಿರುವುದಕ್ಕೆ ಸಂತಸವೆನಿಸುತ್ತಿದೆ. ಈ ಉಪಕ್ರಮಕ್ಕೆ ನಮ್ಮ ಇಲಾಖೆ ಬೆಂಬಲವಾಗಿ ನಿಲ್ಲುವ ಬದ್ಧತೆಯನ್ನು ತೋರಿಸುತ್ತದೆಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತದ ಬಡತನ ನಿರ್ಮೂಲನೆ, ಬಿಲ್ ಮತ್ತು ಮೆಲಿಂಡ ಗೇಟ್ಸ್ ಫೌಂಡೇಶನ್ (ಬಿಎಂಜಿಎಫ್)ನ ನಿರ್ದೇಶಕ ಅಲ್ಕೇಶ್ ವಾಧ್ವಾನಿ ಅವರು, “ಈ ಪೈಲಟ್ ಯೋಜನೆಯ ಆರಂಭ ನಮಗೆ ಸಂತಸ ತಂದಿದೆ. ಭಾರತಕ್ಕಾಗಿ ಒನ್ ಹೆಲ್ತ್ ಫ್ರೇಂವರ್ಕ್ ಅನುಷ್ಠಾನಕ್ಕಾಗಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಗೆ ಸಂಪೂರ್ಣ ಬೆಂಬಲವಿದೆ’’ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Atul ChaturvediBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaOne healthState Newsಒನ್-ಹೆಲ್ತ್ತುಲ್ ಚತುರ್ವೇದಿಬೆಂಗಳೂರು
Previous Post

ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ

Next Post

ಜೂ.30ರಂದು ಬೃಹತ್ ಉದ್ಯೋಗ ಮೇಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೂ.30ರಂದು ಬೃಹತ್ ಉದ್ಯೋಗ ಮೇಳ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!