ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಂದ್ರಯಾನ-3 Chandrayaana-3 ಮಿಷನ್ ಯಶಸ್ವಿಯಾಗಿದ್ದು, ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಘೋಷಿಸಿದ್ದಾರೆ.
ಬೆಂಗಳೂರಿನ ಇಸ್ರೋ ISRO ಕಮಾಂಡ್ ಸೆಂಟರ್‌ನಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ಆಗಸ್ಟ್ 23ರಂದು ಚಂದ್ರಯಾನ ಯಶಸ್ಚಿಯಾದ ಹಿನ್ನೆಲೆ ಆ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವೇಂದು ಆಚರಿಸೋಣ. ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ ಎಂದರು.
ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ Vikram Lander ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ Shivashakti Point ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಹೆಮ್ಮೆ ವ್ಯಕ್ತಪಡಿಸಿದರು.
Also read: ವ್ಯಕ್ತಿತ್ವ ವಿಕಸನದ ಬದಲಾವಣೆಗಳಿಂದ ಮಾತ್ರ ಶಿಬಿರಗಳ ಯಶಸ್ಸು ಸಾಧ್ಯ: ಡಾ.ವೈ.ಎಂ. ಉಪ್ಪಿನ್
ಚಂದ್ರಯಾನ-2 Chandrayaana-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದ ಪ್ರಧಾನಿ ಮೋದಿ, ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದರು.
ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ. ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಇಸ್ರೊ ವಿಜ್ಞಾನಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post