ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧಪಟ್ಟಂತೆ ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅಧಿಕಾರಿಗಳು ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ McGeachy ನೇತೃತ್ವದ ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ #Minister Sudhakar ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ #Shalini Rajaneesh ಅವರನ್ನು ಶುಕ್ರವಾರ ಭೇಟಿಯಾಗಿ ಚರ್ಚಿಸಿದರು.
ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು #Australia West Sidny University ಭಾರತದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಉತ್ಸುಕವಾಗಿದ್ದು, ಬೆಂಗಳೂರು ನಗರದಲ್ಲಿ ಆರಂಭಿಸಲು ಉದ್ದೇಶಿಸಿದೆ ಎಂದು ಕುಲಪತಿಗಳಾದ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು. ಕೃಷಿಯಲ್ಲಿ ನೀರು ನಿರ್ವಹಣೆ ತಾಂತ್ರಿಕತೆ ಅಳವಡಿಕೆ, ಆಹಾರ ಸಂಸ್ಕರಣೆ ಮುಂತಾದ ಮುಖ್ಯ ವಿಷಯಗಳನ್ನು ಈ ಕೃಷಿ ವಿಶ್ವವಿದ್ಯಾಲಯದಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ವಿವರಿಸಿದರು.

Also read: ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?
ಈ ಸಂಬಂಧ ಮಾತನಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ: ಎಂ.ಸಿ.ಸುಧಾಕರ್ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು. ನಮ್ಮ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಕೃಷಿಗೆ ಸಂಬಂಧಪಟ್ಟಂತಹ ಹೊಸ ಆವಿಷ್ಕಾರದ ವಿಷಯಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಅಲ್ಲದೆ, ವಿದ್ಯಾರ್ಥಿಗಳ ಪರಸ್ಪರ ಕಲಿಕಾ ವಿನಿಮಯ ಕಾರ್ಯಕ್ರಮ ತರಬೇತಿ ಹಾಗೂ ಉಪನ್ಯಾಸಕರ ವಿನಿಮಯದ ಮೂಲಕ ಶೈಕ್ಷಣಿಕವಾಗಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post