ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಧನವನ್ನು ಪಡೆಯಲು ನಾಳೆಯಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಮಾಹಿತಿ ಪ್ರಕಟಿಸಿದ್ದು, ಪರಿಹಾರ ಧನ ಪಡೆಯಲು ಅರ್ಹರಾಗಿರುವ ಚಾಲಕರು ಮೇ 27ರ ನಾಳೆ ಬೆಳಗ್ಗೆ 11 ಗಂಟೆಯಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೆ ಒಳಪಟ್ಟಂತೆ 4 ಸಾವಿರ ರೂ.ಗಳ ಪರಿಹಾರ ಧನವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದನ್ನು ಪಡೆಯಲು ನಾಳೆಯಿಂದ ಅರ್ಜಿ ಸಲ್ಲಿಸಿದರೆ, ಅವರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲಾಗುತ್ತದೆ. ಅರ್ಹ ಚಾಲಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post