No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ

kalpa News by kalpa News
October 27, 2021
in ಬೆಂಗಳೂರು ನಗರ
0
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ 2 ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ ನಾವು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಸಂಧರ್ಭ ಉಂಟಾಗಲಿದೆ ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ ಸಿ ವೇಣುಗೋಪಾಲ್‌ ವಿಷಾಧ ವ್ಯಕ್ತಪಡಿಸಿದರು.

ಕುಮಾರ ಕೃಪಾ ಅತಿಥಿ ಗೃಹದಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಐಎಎಸ್‌, ಕೆಎಸ್‌ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.


ಪಂಚಮಸಾಲಿ ಸಮುದಾಯದಂತಹ ಮುಂದುವರೆದ ಜಾತಿಗಳ ಸ್ವಾಮೀಜಿಗಳು ತಮ್ಮ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸುವಂತೆ ಇನ್ನಿಲ್ಲದ ಒತ್ತಡವನ್ನು ಸರಕಾರದ ಮೇಲೆ ಹೇರುತ್ತಿವೆ. ಅಲ್ಲದೆ, ರಾಜ್ಯದಲ್ಲಿ ಮುಂದುವರೆದ ಜಾತಿಗಳು ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದ ಸಂವಿಧಾನಾತ್ಮಕ ಅಧಿಕಾರವನ್ನು ಕಸಿಯುವ ಪ್ರಯತ್ನದಲ್ಲಿ ತೊಡಗಿಕೊಂಡಿವೆ. ಇಂತಹ ಪ್ರಯತ್ನಗಳ ವಿರುದ್ದ ರಾಜ್ಯಾದ್ಯಂತ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ನಾವುಗಳು ಹಿಂದುಳಿದ ಸಮುದಾಯದ ಸ್ವಾಮೀಜಿಗಳ ಸಭೆಯನ್ನು ನಡೆಸಿದ್ದೇವೆ. ಇಂದು ರಾಜ್ಯದ ಅತಿ ಹಿಂದುಳಿದ ವರ್ಗಗಳ ಸಮುದಾಯದ ನಿವೃತ್ತ ಮತ್ತು ಹಾಲಿ ಹಿರಿಯ ಅಧಿಕಾರಿಗಳು ಮತ್ತು ನೌಕರರ ಸಭೆಯನ್ನು ನಡೆಸಿದ್ದೇವೆ. ಈ ವೇದಿಕೆಯ ಅಡಿಯಲ್ಲಿ ಸಂಘಟಿತವಾದಂತಹ ಹೋರಾಟವನ್ನು ಇಂದಿನ ದಿನಗಳಲ್ಲಿ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದಂತಹ ಸ್ವಾಮೀಜಿಗಳು ಹಾಗೂ ನಿವೃತ್ತ ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ. ಎಸ್‌. ದ್ವಾರಕಾನಾಥ್‌ ಮಾತನಾಡಿ, 2 ಏ ಪ್ರವರ್ಗದಲ್ಲಿ ಕುಶಲಕರ್ಮಿಗಳ ಸಮುದಾಯಗಳಿಗೆ ಮೀಸಲಾತಿಯನ್ನು ನೀಡಲಾಗಿದೆ. ಈ ಮೀಸಲಾತಿಯ ವರ್ಗದಲ್ಲಿ ರಾಜಕೀಯ ಹಾಗೂ ಆರ್ಥಿಕವಾಗಿ ಮುಂದುವರೆದ ಜಾತಿಗಳನ್ನು ಸೇರಿಸುವುದು ಸರಿಯಲ್ಲ. ಸದರಿ ಸಮುದಾಯದ ಸ್ವಾಮೀಜಿಗಳು ಸರಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಗಡುವು ನೀಡುವ ಮಟ್ಟಕ್ಕೂ ಮುಂದುವರೆದಿದ್ದಾರೆ. ರಾಜ್ಯ ಮಟ್ಟದಲ್ಲಿ ಬಲಿಷ್ಠ ಸಮುದಾಯದ ಒತ್ತಡ ಒಂದು ಕಡೆ ಆದರೆ, ಇನ್ನೊಂದೆಡೆ, ರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಅಸಂವಿಧಾನಿಕ ಕ್ರಿಯೆ ಆರಂಭವಾಗಿದೆ. ಇವೆಲ್ಲವುಗಳ ಮಧ್ಯೆ ಅತಿ ಹಿಂದುಳಿದ ಜಾತಿಗಳು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಲಿವೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಸಮುದಾಯದ ಎಲ್ಲಾ ಕ್ಷೇತ್ರದವರೂ ಒಗ್ಗಟ್ಟಿನ ಹೋರಾಟ ನಡೆಸುವುದು ಅತ್ಯವಶ್ಯ ಎಂದು ಹೇಳಿದರು.

ನಿವೃತ್ತ ಐಎಎಸ್‌ ಅಧಿಕಾರಿ ಶ್ರೀನಿವಾಸಾಚಾರಿ ಮಾತನಾಡಿ, ಅತಿ ಹಿಂದುಳಿದ ವರ್ಗಗಳ ಮೇಲೆ ರಾಜ್ಯದಲ್ಲಿ ಅಪಾರವಾದ ಅನ್ಯಾಯ ನಡೆಯುತ್ತಿದೆ. ಸಾಂವಿಧಾನತ್ಮಕವಾಗಿ ಅತಿ ಹಿಂದುಳಿದ ಸಮುದಾಯದ ಹಕ್ಕನ್ನು ಕಸಿದುಕೊಳ್ಳುವ ಶಕ್ತಿಗಳ ವಿರುದ್ದ ಸಂಘಟನೆ ಮಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಹಿರಿಯ ಅಧಿಕಾರಿಗಳು ಕೈಜೋಡಿಸುವುದು ಅನಿವಾರ್ಯ ಎಂದು ಹೇಳಿದರು.


ಸಭೆಯಲ್ಲಿ ನಿವೃತ್ತ ಐಎಎಸ್‌ ಅಧಿಕಾರಿಗಳಾದ ಕೆ. ಆರ್‌. ನಿರಂಜನ್‌ , ಬಿ. ಎನ್‌. ಕೃಷ್ಣಯ್ಯ, ಪ್ರಭಾಕರ್‌, ಮಾಜಿ ಕೆಪಿಎಸ್‌ಸಿ ಸದಸ್ಯ ಲಕ್ಷ್ಮಿನರಸಯ್ಯ, ಹಿರಿಯ ಅಧಿಕಾರಿಗಳಾದ ಎಂ. ಲಕ್ಷ್ಮಣ್‌, ಹೆಚ್‌. ಟಿ. ಮೋಹನ್ ದಾಸ್‌, ಪಿ. ಮುನಿರಾಜಪ್ಪ, ಗೋಪಾಲಪ್ಪ, ಬಿ.ಪಿ ಲಿಂಗಣ್ಣ, ಶ್ರೀನಿವಾಸ್‌, ಮುನಿ ಕೃಷ್ಣಪ್ಪ, ಎಂ.ಡಿ. ನರಸಿಂಹ ಮೂರ್ತಿ, ಎಲ್‌. ಎ. ಮಂಜುನಾಥ್‌, ಎನ್‌. ಪ್ರಭಾಕರ್‌, ಡಿ.ಕೆ. ಮೋಹನ್‌, ಆರ್‌. ಶ್ರೀಧರ್‌, ಬಿ..ಪಿ. ಹನುಮಂತರಾಯಪ್ಪ, ವಕೀಲರಾದ ರಾಜಶೇಖರ್‌. ಹೆಚ್‌. ಪಿ. ಸೇರಿದಂತೆ ಹಲವರು ಮಂದಿ ಅಧಿಕಾರಿಗಳು ಮತ್ತು ನೌಕರರು ಹಾಗೂ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜ್‌ ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರು
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ

Next Post

ನವೆಂಬರ್ ಬಂತೆಂದರೆ ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್ ನೆನಪು…

kalpa News

kalpa News

Next Post
ಡಾ. ರಾಜ್ ಅವರ ಸರಳ ಸಜ್ಜನಿಕೆಯ ದರ್ಶನ ಮಾಡಿಸಿದ ಆ ಒಂದು ಸಂದರ್ಶನ ನಮಗೆ ದೊರೆತ ಸುವರ್ಣಾವಕಾಶ

ನವೆಂಬರ್ ಬಂತೆಂದರೆ ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್ ನೆನಪು...

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL