ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಯನೂರು ಮಂಜುನಾಥ್ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಇಂದು ಜೆಡಿಎಸ್ ಸೇರ್ಪಡೆಗೊಂಡು ಬಿಫಾರ್ಮ್ ಪಡೆದಿದ್ದಾರೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾದಗಿನಿಂದಲೂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅತೃಪ್ತಿ ಹೊಂದಿ ಅನೇಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಾಮಾನ್ಯವಾಗಿದೆ.

ಹೌದು ಇಂದು ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದು, ಶಿವಮೊಗ್ಗ ಚುನಾವಣಾ ಕಣ ಇನ್ನೂ ಕುತೂಹಲ ಹುಟ್ಟುಹಾಕಿದೆ. ಒಂದೆಡೆ ಬಿಜೆಪಿ ಇಲ್ಲಿಯವರೆಗೂ ಶಿವಮೊಗ್ಗ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇನ್ನು ನಿನ್ನೆ ಮಾಜಿ ಶಾಸಕ ಪ್ರಸನ್ನಕುಮಾರ್ ಜೆಡಿಎಸ್ ಸೇರ್ಪಡೆಗೊಂಡು ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿಯಾಗಿ ಬಿಫಾರ್ಮ್ ಪಡೆದಿದ್ದಾರೆ ಎಂದು ಸುದ್ಧಿ ಹರಿದಾಡುತ್ತಿರುವ ಬೆನ್ನಲ್ಲೆ ಆಯನೂರು ಮಂಜುನಾಥ್ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡು ಚುನಾವಣಾ ಕಣಕ್ಕಿಳಿದಿದ್ದಾರೆ.

Also read: ಐಷಾರಾಮಿ ಕಾರು ಬಿಟ್ಟು ಯಡಿಯೂರಪ್ಪ, ವಿಜಯೇಂದ್ರ ಅಂಬಾಸಿಡರ್ ಕಾರಿನಲ್ಲಿ ತೆರಳಿದ್ದೇಕೆ?











Discussion about this post