ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇರಳದಲ್ಲಿ ಕೊರೋನಾ Corona ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು Minister Boseraju ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.
Also read: ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆ: ಕರ್ನಾಟಕಕ್ಕೆ ಒಂದು ಬೆಳ್ಳಿ, ಎರಡು ಕಂಚು
ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು. ಕರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post