ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ನಂತರ ಮತ್ತು ಮತದಾನಕ್ಕೂ ಮುನ್ನ 48 ಗಂಟೆಗಳ ‘ಮೌನ ಅವಧಿಯಲ್ಲಿ’ ಸಾಮಾಜಿಕ ಮಾಧ್ಯಮ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 100ಕ್ಕೂ ಹೆಚ್ಚು ದೂರುಗಳನ್ನು ಚುನಾವಣಾ ಅಧಿಕಾರಿಗಳು ದಾಖಲಿಸಿದ್ದಾರೆ.
ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ‘ಮೌನ ಅವಧಿಯಲ್ಲಿ’ ಯಾವುದೇ ವೀಡಿಯೊಗಳು ಅಥವಾ ಪೋಸ್ಟರ್‌ಗಳ ಮೂಲಕ ನಾಗರಿಕರಿಗೆ ಮತ ನೀಡುವಂತೆ ಕೇಳಿಕೊಳ್ಳುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಎಂಸಿಎಂಸಿಯ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಮತ ನೀಡಿ: “ಕಾಂಗ್ರೆಸ್ ಗೆಲುವು ನಿಮ್ಮ ಗೆಲುವು” ಎಂದು ಟ್ವೀಟ್ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Siddarmaiah ಅವರ ವಿರುದ್ಧ ಮತ್ತು ಮೌನ ಅವಧಿಯಲ್ಲಿ ಕರ್ನಾಟಕದ ನಾಗರಿಕರಿಗೆ ಬರೆದ ಬಹಿರಂಗ ಪತ್ರದಲ್ಲಿ ಕರ್ನಾಟಕದ ಪ್ರತಿಯೊಬ್ಬ ನಾಗರಿಕನ ಕನಸು ನನ್ನ ಕನಸು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಮೇಲ್ವಿಚಾರಕ ಆನಂದ್ ವಿ ಅವರು ಹೇಳಿದ್ದಾರೆ.











Discussion about this post