ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ನವೆಂಬರ್ 14ರ ಭಾನುವಾರ ಬೆಂಗಳೂರಿನಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.
ಆದರೆ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸ್ಥಾನಗಳಿಗೆ ಡಿ.10ರಂದು ವಿಧಾನಪರಿಷತ್ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post