ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯಸರ್ಕಾರಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಬೇಡಿಕೆಯನ್ನು ಪರಿಷ್ಕರಿಸುವಂತೆ ಹೈಕೋರ್ಟ್ ನೀಡಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎನ್ನಲಾಗಿದೆ.

ಕೊರೋನಾ ಎರಡನೆಯ ಅಲೆಯಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿದ್ದು, ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆಯೂ ಹೆಚ್ಚಾಗತೊಡಗಿದೆ. ಅಗತ್ಯವಿರುವಷ್ಟು ಆಕ್ಸಿಜನ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತಾದ್ದರೂ, ಕೇಂದ್ರದಿಂದ ಸೂಕ್ತ ಪ್ರತಿಕ್ರಿಯೆ ದೊರೆತಿರಲಿಲ್ಲ. ಕರ್ನಾಟಕದ ಜನರನ್ನು ಕಷ್ಟಕ್ಕೆ ದೂಡಲು ಸಾಧ್ಯವಿಲ್ಲ ಎನ್ನುವ ನಿಟ್ಟಿನಲ್ಲಿ 1,200 ಮೆಟ್ರಿಕ್ ಟನ್ ಆಮ್ಲಜನಕ ನೀಡುವಂತೆ ಹೇಳಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬೆಂಬಲಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















