ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರ ಬಿಜೆಪಿ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕಾತಿಗೆ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ.

Also read: ಸಮ ಸಮಾಜ ನಿರ್ಮಾಣಕ್ಕೆ ಬಿಜೆಪಿ ವಿರೋಧ: ಸಿದ್ಧರಾಮಯ್ಯ ಆರೋಪ
ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿರುವುದು ಸ್ಪಷ್ಟ ಎಂದು ಅವರು ಹೇಳಿದ್ದಾರೆ.

ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಅವರು ಕಿಡಿ ಕಾರಿದ್ದಾರೆ.











Discussion about this post