ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಳೆದ 13 ತಿಂಗಳಿನಿAದ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ Shivamurthi Shri of Murugha Mutt ಷರತ್ತುಬದ್ದ ಜಾಮೀನು ದೊರೆತಿದ್ದರೂ, ಬಿಡುಗಡೆಯಾಗುವುದು ಅನುಮಾನವಾಗಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಒಂದು ಪೊಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಾಮೀಜಿಗೆ ಮಂಜೂರು ಮಾಡಿದ್ದಾರೆ. ಆದರೆ, ಇನ್ನೊಂದು ಪ್ರಕರಣದಲ್ಲಿ ಜಾಮೀನು ದೊರೆಯಬೇಕಿದ್ದು, ಅದು ಸಿಕ್ಕರೆ ಮಾತ್ರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Also read: ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ
ಮುರುಘಾಶ್ರೀ ಹಾಸ್ಟೆಲ್ ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ರೂಮಿಗೆ ಕರೆಸಿಕೊಳ್ಳುತ್ತಿದ್ದರು. ಮತ್ತು ಬರಿಸುವ ಚಾಕಲೇಟ್ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಸಂತ್ರಸ್ತರು ದೂರು ನೀಡಿದ್ದರು. ಇದು ಎರಡನೆಯ ಪೋಕ್ಸೋ ಪ್ರಕರಣವಾಗಿದ್ದು ಈ ಪ್ರಕಣದ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿದೆ.

- ಜಾಮೀನು ಪಡೆಯು ಮೊದಲು ಇಬ್ಬರು ಶ್ಯೂರಿಟಿ ನೀಡಬೇಕು
- 2 ಲಕ್ಷ ರೂ. ಬೆಲೆಯ ಬೇಲ್ ಬಾಂಸ್ ನೀಡಬೇಕು
- ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು
- ಪಾಸ್ ಪೋರ್ಟ್ ಒಪ್ಪಿಸಿ, ವಿದೇಶಕ್ಕೆ ಹೋಗುವಂತಿಲ್ಲ
- ಆದೇಶದವರೆಗೂ ಚಿತ್ರದುರ್ಗಕ್ಕೆ ತೆರಳುವಂತಿಲ್ಲ
- ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗುವಂತಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post