ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಬಳ್ಳಾರಿ |
ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ #Shri Vyasanakere Prabhanjanacharya ಅವರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ #Kanakashri ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಸಚಿವ ಶಿವರಾಜ ತಂಗಡಗಿ #Minister Shivarajthangadagi ಅವರು ಮಾಹಿತಿ ನೀಡಿದ್ದು, ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Also read: ಪಠ್ಯೇತರ ಚಟುವಟಿಕೆಗಳು ಶಕ್ತಿಯುತ ವ್ಯಕ್ತಿತ್ವವಾಗಿ ಹೊರಹೊಮ್ಮಲು ಪ್ರೇರಕ: ಶಾಸಕ ಚನ್ನಬಸಪ್ಪ
ನ.18ರ ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಪ್ರದಾನ ಮಾಡಲಿದ್ದಾರೆ ಎಂದವರು ಹೇಳಿದರು.
ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು , ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post