ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಿ #Plastic Bottle Ban ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಆದೇಶ ಹೊರಡಿಸಿದ್ದಾರೆ.
ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿವಿಗಳಿಗೆ ಗಣ್ಯರ ಹೆಸರಿಡಲು ಚಿಂತನೆ
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನ ಮುಂದಿನ ಸಚಿವ ಸಂಪುಟದ ಮುಂದೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post