ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೆಟ್ರೋ ರೈಲು Metro Train ಬರುತ್ತಿದ್ದಂತೆ ಹಳಿ ಮೇಲೆ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಧ್ರುವ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ರೈಲು ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಯುವಕ ರೈಲು ಹಳಿ ಮೇಲೆ ಜಿಗಿದಿದ್ದಾನೆ. ಮೆಟ್ರೋ ರೈಲು ಹರಿದ ಪರಿಣಾಮ ಆತನ ರುಂಡ, ಮುಂಡ ಬೇರ್ಪಟ್ಟಿದ್ದು, ದೇಹವು ಛಿದ್ರಗೊಂಡಿದೆ.
Also read: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ | ಸಂಸದ ರಾಘವೇಂದ್ರ ಹೀಗೆ ಹೇಳಿದ್ದೇಕೆ?
ಯುವಕ ಮೊಬೈಲ್’ನಲ್ಲಿ ಮಾತನಾಡಿಕೊಂಡೆ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಹಳಿಗೆ ಬಿದ್ದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ವೈಟ್ ಫೀಲ್ಡ್’ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಕೆಲಕಾಲ ಮಾಗಡಿ ರಸ್ತೆ ಮತ್ತು ವೈಟ್ ಫೀಲ್ಡ್ ನಡುವಣ ಮಾತ್ರ ರೈಲು ಸಂಚಾರವಿತ್ತು. ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ತಾತ್ಕಾಲಿಕವಾಗಿ ರೈಲು ಸಂಚಾರ ಸ್ಥಗಿತವಾಗಿದ್ದು, ಬಳಿಕ ಈ ಮಾರ್ಗದಲ್ಲಿ ರೈಲು ಸಂಚಾರ ಪುನಃ ಆರಂಭವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















