ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿ ಮೊದಲ ಮಂಕಿಪಾಕ್ಸ್ #MonkeyPox ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ #Kempegowda International Airport ಹೈಅಲರ್ಟ್ ಘೋಷಿಸಲಾಗಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಲಾಗುತ್ತಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಕಿಪಾಕ್ಸ್ ಮೊದಲ ಪ್ರಕರಣ ಪತ್ತೆಯಾಗಿದೆ. ಹೀಗಾಗಿ, ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಇದರ ಭಾಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ವಿದೇಶಗಳಿಂದ ಬರುವ ಪ್ರತಿ ಪ್ರಯಾಣಿಕರೂ ಆರೋಗ್ಯ ತಪಾಸಣೆಗೆ ಒಳಪಡುವುದನ್ನು ಕಡ್ಡಾಯ ಮಾಡಲಾಗಿದೆ.
Also read: ಮಂಗಳೂರು | ಕಾಟಿಪಳ್ಳ ಮಸೀದಿ ಮೇಲೆ ಕಲ್ಲು ತೂರಾಟ | ಪರಿಸ್ಥಿತಿ ಉದ್ವಿಗ್ನ
ಪ್ರತಿಯೊಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕರು ವೈರಸ್ ಪರೀಕ್ಷೆಗೆ ಒಳಗಾಗುವುದನ್ನು ಖಚಿತಪಡಿಸಿಕೊಳ್ಳಲು ಕೆಐಎ ನಾಲ್ಕು ಮೀಸಲಾದ ಕಿಯೋಸ್ಕ್’ಗಳನ್ನು ಸ್ಥಾಪಿಸಿದೆ.
ಪ್ರತಿದಿನ ಸುಮಾರು 2,000 ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಕರ್ನಾಟಕಕ್ಕೆ ಎಂಪಾಕ್ಸ್ ಪ್ರವೇಶವನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಸ್ಕ್ರೀನಿಂಗ್, ಪರೀಕ್ಷೆ ಮತ್ತು ಟ್ರ್ಯಾಕಿಂಗ್’ನಾದ್ಯಂತ ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ನಿಯೋಜಿತ ಅಧಿಕಾರಿಯನ್ನು ನಿಯೋಜಿಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post