ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಇಂದು ನಡೆದ ಬೆಂಗಳೂರು ಬಂದ್ ವೇಳೆ ರಕ್ಷಣೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ Karnataka Police ಪೊರೈಕೆ ಮಾಡಿದ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು ನಗರ ಪೊಲೀಸ್ ಇಲಾಖೆಯು ಹೊರ ಜಿಲ್ಲೆಗಳು ಹಾಗೂ ಬೆಂಗಳೂರಿನ ಹೊರ ವಲಯದ ವಿವಿಧ ಪೊಲೀಸ್ ಠಾಣೆಯಿಂದ ಬೆಂಗಳೂರು ಬಂದ್ ಭದ್ರತೆಗೆ ಬಂದ ಪೊಲೀಸ್ ಸಿಬ್ಬಂದಿಗೆ ಇಲಿ ಸತ್ತು ಬಿದ್ದಿರುವ ಊಟವನ್ನು ಸರಬರಾಜು ಮಾಡಲಾಗಿದೆ.
ಊಟದಲ್ಲಿ ಸತ್ತ ಇಲಿ ಪತ್ತೆಯಾದ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಊಟವನ್ನು ಸರಬರಾಜು ಮಾಡಿದ ಹೊಟೇಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಊಟ ಸರಬರಾಜು ಮಾಡುವ ಜವಾಬ್ದಾರಿ ಹೊತ್ತ ಇಲಾಖೆಯ ಅಧಿಕಾರಿಗೂ ಸಹ ನೊಟೀಸ್ ಜಾರಿ ಮಾಡಿದ್ದಾರೆ.
Also read: ಐತಿಹಾಸಿಕ ಘಟನೆಗೆ ಸುಪ್ರೀಂ ಕೋರ್ಟ್ ಸಾಕ್ಷಿ: ಬೆಂಗಳೂರು ಮೂಲದ ಮೂಕ ವಕೀಲೆ ವಾದ ಮಂಡನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post