ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಗುರುವಾರ ರಥೋತ್ಸವ, ನೃತ್ಯ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆಗಳು ನಡೆದವು.
ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ ಜರುಗಿದವು.
ಈ ಕುರಿತಂತೆ ಮಾಹಿತಿ ನೀಡಿದ ಶ್ರೀಮಠದ ನಂದಕಿಶೋರ ಆಚಾರ್ಯರು, ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ನಡೆಯಿತು ಎಂದು ತಿಳಿಸಿದರು.
Also read: ಏನಿದು ಬ್ರಷ್ ಕಟರ್ ಸೈಕಲ್ ಟ್ರಾಲಿ? ಕೃಷಿ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ ಓದಿ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಪದ್ಮಜಾ ಜಯರಾಮ್ ಅವರ ನಿರ್ದೇಶನದಲ್ಲಿ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು.
ನೂರಾರು ಭಕ್ತರು ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಶ್ರೀ ಗುರುರಾಯರ ದರ್ಶನ ಪಡೆದು ತದನಂತರ ತೀರ್ಥ, ಮಂತ್ರಾಕ್ಷತೆ, ಪ್ರಸಾದ ಸ್ವೀಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post