ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರ ಜನವರಿಯೊಳಗೆ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Central Minister Nitin Gadkari ಹೇಳಿದರು.
Inspected the progress of the Bengaluru – Chennai Expressway with Karnataka PWD Minister Shri @CCPatilBJP Ji and MP Shri @BNBachegowda_MP Ji. We are constructing this 262 km long 8-Lane structure worth of ₹16,730 Cr.#PragatiKaHighway #GatiShakti #BengaluruChennaiExpressway pic.twitter.com/Lq92uRdGjj
— Nitin Gadkari (@nitin_gadkari) January 5, 2023
8 ಪಥಗಳ ಈ ಎಕ್ಸ್‌ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಬೆಂಗಳೂರು- ಚೆನೈ ಹೈವೇ ಕರ್ನಾಟಕದಲ್ಲಿ 3 ಪ್ಯಾಕೇಜ್ ಇದ್ದು, ಈ ಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಸುಮಾರು 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಹಾದು ಹೋಗುವ ಹೆದ್ದಾರಿ ಉದ್ದ 71 ಕಿ.ಮೀ ಇದ್ದು, ಇದಕ್ಕಾಗಿ 5096 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಕರ್ನಾಟಕ ಭಾಗದಲ್ಲಿನ ಹೆದ್ದಾರಿಯ ಕಾಮಗಾರಿ ಪೈಕಿ ಈಗಾಗಲೇ ಶೇ.34ರಷ್ಟು ಪೂರ್ಣಗೊಂಡಿದೆ. ಈ ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೊಂಡ ಬಳಿಕ, ಬೆಂಗಳೂರಿನಿಂದ 2.15 ಗಂಟೆಯಲ್ಲಿ ಚೆನ್ನೈಗೆ ಹೋಗಬಹುದು. ಲಾಜಿಸ್ಟಿಕ್ ವೆಚ್ಚ ಉಳಿಸಲು ಇದರಿಂದ ಸಾಧ್ಯವಾಗಲಿದೆ. ದೇಶದಲ್ಲಿ ಸದ್ಯ ಲಾಜಿಸ್ಟಿಕ್ ವೆಚ್ಚ ಶೇ. 16ರಷ್ಟಿದೆ. ಹಾಗಾಗಿ, ಎಕ್ಸ್‌ಪ್ರೆಸ್ ವೇಯಿಂದ ಶೇ.4ರಷ್ಟು ವೆಚ್ಚವನ್ನು ತಗ್ಗಿಸಬಹುದಾಗಿದೆ ಎಂದು ತಿಳಿಸಿದರು.
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯನ್ನು ಅಮೃತ ಮಹೋತ್ಸವ ಪಕ್ಷಿಗಳ ಗಾರ್ಡನ್ ಮಾಡಲಿದ್ದೇವೆ. ಜೊತೆಗೇ ಅಮೃತ್ ಸರೋವರ ಕೂಡ ನಿರ್ಮಾಣ ಮಾಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post