ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಆ.6 ರಿಂದ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ” ವಿಷಯವಾಗಿ ಧಾರ್ಮಿಕ ಪ್ರವಚನ, ಚಾಂದಿನಿ ಗರ್ತಿಕೆರೆ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ ನಡೆಯಿತು.
Also read: ಸೊರಬ | ತಾಲೂಕಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

ಇದೇ ಸಂದರ್ಭದಲ್ಲಿ ವಿದ್ವಾನ್ – ಸುಬ್ರಹ್ಮಣ್ಯ ಆಚಾರ್ಯರಿಗೆ ಶ್ರೀ ಮಠದ ಪರವಾಗಿ ಆರ್ ಕೆ ವಾದಿಂದ್ರಚಾರ್ಯರು ಮತ್ತು ನಂದಕಿಶೋರಾಚಾರ್ಯರು ಸನ್ಮಾನಿಸಿದರು ಈ ವಿಶೇಷ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಶ್ರೀ ಸುಧೀಂದ್ರ ದೇಸಾಯಿಯವರು ಮತ್ತು ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post