ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ವತಿಯಿಂದ ಗವಿಮಾರ್ಗ Gavimarga ಪುಸ್ತಕ ಬಿಡುಗಡೆ, ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ VPSingh Award ಮತ್ತು ಮಂಡಲ್ ವರದಿ ಆಗಿದ್ದೇನು? ವಿಚಾರ ಸಂಕಿರಣ ಕಾರ್ಯಕ್ರಮವನ್ನು ಡಿ.1ರಂದು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಾ.ಎಂ.ಎಸ್.ಮಣಿ ಬರೆದಿರುವ ಗವಿಮಾರ್ಗ ಪುಸ್ತಕವನ್ನು ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು. ಮಾಜಿ ಸಚಿವ ಎಚ್. ಆಂಜನೇಯ ಅವರು ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್. ನೀಲಕಂಠ ಅಧ್ಯಕ್ಷತೆ ವಹಿಸುವರು.
ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು ಮಂಡಲ್ ವರದಿ ಆಗಿದ್ದೇನು? ಎಂಬ ವಿಚಾರ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಪ್ರಜಾಪ್ರಗತಿ ಸಂಪಾದಕ ಎಸ್. ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
Also read: ಕಾಸ್ಮೋ ಕ್ಲಬ್ ಕಪ್ | ಡಿ.3ರಂದು ಶಿವಮೊಗ್ಗದಲ್ಲಿ ಮುಕ್ತ ರ‍್ಯಾಪಿಡ್ ಚೆಸ್ ಪಂದ್ಯಾವಳಿ
ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಎಚ್. ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷ್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್. ಆರ್. ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಬಿ.ಕೆ. ರವಿ ಇವರುಗಳಿಗೆ ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post