ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಶ್ರೀಗುರು ರಾಯರ 353ನೇ ಆರಾಧನೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಉಡುಪಿ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀಥ ಶ್ರೀಪಾದಂಗಳವರು ಗೋಪೂಜೆ, ಧನ-ಧಾನ್ಯ ಪೂಜೆ ನೆರೆವೇರಿಸಿ, ಸಪ್ತರಾತ್ರೋತ್ಸವನ್ನು ಉದ್ಘಾಟಿಸಿದರು.

Also read: ಹಾಸ್ಟೆಲ್ ಊಟ ಸೇವಿಸಿ 20ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ!
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ. ಈ ಸಪ್ತರಾತ್ರೋತ್ಸವವನ್ನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #Shri Subhudendra Thirtharu ಆದೇಶದಂತೆ ಸಪ್ತರಾತ್ರೋತ್ಸವ ಆರಂಭಗೊಂಡಿದೆ.

ಈ ಸಂದರ್ಭದಲ್ಲಿ ಭಕ್ತರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	



 Loading ...
 Loading ... 
							



 
                
Discussion about this post