No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ರಾಜ್ಯ, ಹೊರರಾಜ್ಯಗಳಿಂದ ಕೃಷಿಕರ ಆಗಮನ

kalpa News by kalpa News
February 13, 2021
in ಶಿವಮೊಗ್ಗ
0
ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಗರ ಹೊರವಲಯದ ಹೆಸರಘಟ್ಟದ ಸಸ್ಯಕಾಶಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ- ಐಐಎಚ್‌ಆರ್‌ನಲ್ಲಿ ಐದು ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ ಜನಸಾಗರದ ನಡುವೆ ತೆರೆಕಂಡಿತು.

ಐದು ದಿನಗಳ ಮೇಳದಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳ ಲಕ್ಷಕ್ಕೂ ಅಧಿಕ ರೈತರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಸಾರ್ವಜನಿಕರೂ ಸಹ ಭೇಟಿ ಕೊಟ್ಟು ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.


ಮೇಳಕ್ಕೆ ಬಂದವರ ಪೈಕಿ, ಕೃಷಿಯಲ್ಲಿ ಆಸಕ್ತಿ ಉಳ್ಳವರು, ತಮ್ಮ ಮಕ್ಕಳನ್ನು ಕೂಡ ಮೇಳದಲ್ಲಿ ಪಾಲ್ಗೊಳಿಸಿ, ಬೆಳೆಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಾಗಿದ್ದು ವಿಶೇಷ. ಈ ಬಾರಿ ಮೇಳಕ್ಕೆ ಸ್ಥಳೀಯ ರೈತರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿತ್ತಾದರೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯಲ್ಲಿ ರೈತರು, ಯುವ ಕೃಷಿ ಉದ್ದಿಮೆಗಳು ಆಗಮಿಸಿದ್ದರು.

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳಿಂದ ರೈತರು ಮೇಳಕ್ಕೆ ಭೇಟಿ ಕೊಟ್ಟಿದ್ದರು. ದೂರದ ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತಿತರ ರಾಜ್ಯಗಳಿಂದಲೂ ಜನರು ಬಂದಿದ್ದರು.

ಬಿಹಾರದಿಂದಲೂ ರೈತ ಕೂಟ ಭೇಟಿ
ಈ ಬಾರಿ ಮೇಳ ವೀಕ್ಷಣೆಗೆ ಬಿಹಾರದಿಂದಲೂ ರೈತರು ಆಗಮಿಸಿದ್ದರು. ಪಾಟ್ನಾ ಸಮೀಪದ ಹಳ್ಳಿಯೊಂದರ ರೈತ ಓಂಪ್ರಕಾಶ್ ಚೌತಾಲ ಮತ್ತು ಅವರ ಆಪ್ತಕೂಟ, ಈ ಮೇಳಕ್ಕೆ ಭೇಟಿ ಕೊಟ್ಟು ಮೇಳದ ಆಯೋಜನೆ ಕಂಡು ಖುಷಿಪಟ್ಟರು. ಹಾಗೂ ಐಐಎಚ್‌ಆರ್ ತಳಿಗಳ ಬಗ್ಗೆ ಮಾಹಿತಿ ಪಡೆದರು.

ಲಕ್ಷ ಗಡಿದಾಟಿದ ನೋಂದಣಿ
ದೇಶದ ಎಲ್ಲೆಡೆಯಿಂದ ರೈತರು, ತೋಟಗಾರಿಕೆ ಮೇಳಕ್ಕೆ ಆಗಮಿಸಿದ್ದು. ಸೋಮವಾರದಿಂದ ಶುಕ್ರವಾರದವರೆಗೆ 85 ಸಾವಿರಕ್ಕೂ ಹೆಚ್ಚು ಜನರು ನೋಂದಣಿ ಮಾಡಿಸಿಕೊಂಡು ಮೇಳವನ್ನು ವೀಕ್ಷಿಸಿದ್ದಾರೆ. ಒಟ್ಟಾರೆ ಆನ್‌ಲೈನ್ ಮತ್ತು ಅಪ್‌ಲೈನ್ ನೋಂದಣಿ 15.5 ಲಕ್ಷ ದಾಖಲಾಗಿದೆ.
ಈ ಬಾರಿ ಮೇಳದ ಪ್ರತ್ಯಕ್ಷ ವೀಕ್ಷಣೆಗೆ ರಾಜ್ಯದ ರೈತರಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗಿತ್ತು. ಮೇಳದ ಕೊನೆಯ ದಿನ ನೋಂದಣಿ ಬಿರುಸುಗೊಂಡಿತು. ಸಂಜೆಯವರೆಗೆ ಜನರು ಬರುತ್ತಲೇ ಇದ್ದರು. ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯಲ್ಲಿ ರೈತರು, ಯುವ ಕೃಷಿ ಉದ್ದಿಮೆಗಳು ಆಗಮಿಸಿದ್ದರು ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಹಾಗೂ ಮೇಳದ ನೋಂದಣಿ ಸಮಿತಿ ಮುಖ್ಯಸ್ಥ ಡಾ. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ರೈತರು ಮತ್ತು ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ
ಮೇಳದ ಆರಂಭದ ಮುನ್ನ ದಿನ ಫೆ.7ರಿಂದಲೇ ಹೊರ ಜಿಲ್ಲೆಗಳು ಮತು ರಾಜ್ಯಗಳಿಂದ ಮೇಳಕ್ಕೆ ಬರುವಂತವರಿಗೆ ವಸತಿ ಸೌಕರ್ಯ ಕಲ್ಪಿಸಲಾಗಿತ್ತು. ಪ್ರಗತಿಪರ ರೈತರು, ಕೃಷಿ ಆಸಕ್ತರು, ವಿಜ್ಞಾನಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ, ಮೇಳದ ಮಳಿಗೆಗಳ ಮಾಲೀಕರು ಮತ್ತು ಸಹಾಯಕರಿಗೆ ತಂಗುವ ವ್ಯವಸ್ಥೆ ಮಾಡಲಾಗಿತ್ತು.
ಹೆಸರಘಟ್ಟದ ಟಿ.ಬಿ. ಕ್ರಾಸ್‌ನಲ್ಲಿ ಮೂರು ಕಲ್ಯಾಣ ಮಂಟಪಗಳು, ಐಐಎಚ್‌ಆರ್ ಹಾಸ್ಟೆಲ್, ಐಐಸಿಆರ್ ಗೆಸ್ಟ್‌ಹೌಸ್, ಜಿಕೆವಿಕೆಯ ಸುವರ್ಣ ಭವನ, ರೈತ ತರಬೇತಿ ಕೇಂದ್ರದಲ್ಲಿ ವಸತಿಗೆ ಅನುವು ಮಾಡಿಕೊಡಲಾಗಿತ್ತು.
ಗುಜರಾತ್, ಒಡಿಶಾ, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಿಂದಲೂ ಬಂದು ರೈತರು ವಾಸ್ತವ್ಯ ಹೂಡಿದ್ದರು. ಪ್ರತಿದಿನ 400ರಿಂದ 500 ಜನರ ವಾಸ್ತವ್ಯಕ್ಕೆ ನೆರವಾಗಲಾಗಿತ್ತು. ಐದಾರು ದಿನಗಳಿಂದ ಸರಿಸುಮಾರು ಮೂರರಿಂದ ಮೂರುವರೆ ಸಾವಿರ ಮಂದಿಗೆ ವಸತಿ ಸೌಕರ್ಯ ಕಲ್ಪಿಸಿದ್ದು ವಿಶೇಷ ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಹಾಗೂ ಮೇಳದ ವಸತಿ ಸಮಿತಿ ಮುಖ್ಯಸ್ಥ ಡಾ. ಟಿ.ಎಂ. ಗಜಾನನ ಹೇಳಿದರು.

ನೂಕುನುಗ್ಗಲಿಲ್ಲದೆ ಸವಿ ಸವಿ ರುಚಿ…
ಐದು ದಿನಗಳ ಈ ಮೇಳದಲ್ಲಿ ಎಂದೂ ಕೂಡ ಊಟೋಪಚಾರಕ್ಕೆ ಜನರ ನೂಕು ನುಗ್ಗಲು ಕಾಣಬರಲಿಲ್ಲ. ಊಟ, ತಿಂಡಿ ವ್ಯವಸ್ಥೆಯನ್ನು ತುಂಬಾ ಚೆನ್ನಾಗಿ ಐಐಎಚ್‌ಆರ್ ವತಿಯಿಂದ ಮಾಡಿಸಲಾಗಿತ್ತು. ಅತ್ಯಂತ ಕಡಿಮೆ ಬೆಲೆಗೆ ಪ್ರತಿದಿನವೂ ತುಂಬಾ ಸ್ವಾದೀಷ್ಟಕರ ತಿಂಡಿ ಮತ್ತು ಊಟ ನೀಡಲಾಯಿತು.

ಪ್ರತಿದಿನ ಬೆಳಿಗ್ಗೆ ಒಂದೂವರೆ ಸಾವಿರ ಜನರಿಗೆ ತಿಂಡಿ, 7ರಿಂದ 8 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.  ತಿಂಡಿಗೆ ಬಿಸಿಬೇಳೆಬಾತ್, ಟೊಮೊಟೊ ಬಾತ್, ತರಕಾರಿ ಪಲಾವು, ಗೀ ರೈಸ್, ಮೆಂತ್ಯಾ ಬಾತ್ ಹೀಗೆ ಬಗೆ ಬಗೆಯ ತಿಂಡಿಗಳನ್ನು ನೀಡಲಾಗುತ್ತಿತ್ತು. ಐದು ದಿನವೂ ಖಾಯಂ ಆಗಿ ಮೊಸರನ್ನ ಬಡಿಸಲಾಯಿತು. ಕಳೆದ ಬಾರಿ ತುಂಬಾ ನೂಕುನುಗ್ಗಲು ಇತ್ತು. ಆದರೆ, ಈ ಬಾರಿ ಎಲ್ಲೂ ಆ ದೃಶ್ಯಗಳು ಕಾಣಬರಲಿಲ್ಲ.

ಬೆಳಗ್ಗೆ 11.30ರಿಂದ ಊಟ ಶುರುವಾದರೆ ಸಂಜೆ 5.30ರ ತನಕವೂ ನಡೆಯುತ್ತಿತ್ತು. 10 ಕೌಂಟರ್‌ಗಳಿದ್ದವು. ಪ್ಲಾಸ್ಟಿಕ್ ಮುಕ್ತವಾಗಿದ್ದು, ತಿಂಡಿ ತಿನಿಸುಗಳನ್ನು ಸೇವಿಸಲು ಅಡಿಕೆ ಹಾಳೆ ಮತ್ತು ಸ್ಟೀಲ್ ಚಮಚಗಳ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 100ರಿಂದ 150 ಜನ ಬಾಣಸಿಗರು, ಊಟೋಪಚಾರಕ್ಕೆ ಅನುವಾಗಿದ್ದರು. ಮೇಳದ ಹತ್ತಾರು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು ಎಂದು ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಮತ್ತು ಊಟೋಪಚಾರ ಸಮಿತಿ ಮುಖ್ಯಸ್ಥೆ ಡಾ. ಟಿ.ಆರ್. ರೂಪ ತಿಳಿಸಿದರು.

ಅದ್ಭುತ ಹಲಸಿಗೆ ಮುಗಿಬಿದ್ದ ಜನ
ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಳಿಗೆಗಳಲ್ಲಿ ಜನ ತುಂಬಿ ತುಳುಕಿತ್ತು. ಒಂದೂವರೆ ವರ್ಷದಲ್ಲಿ ಫಲಕೊಡುವ ಅಧ್ಬುತ ಹಲಸು ಮಳಿಗೆಗೆ ಹೆಚ್ಚಿನ ಆಸಕ್ತರು ಮುಗಿಬಿದ್ದರು. ಶುಕ್ರವಾರ ಒಂದೇ ದಿನ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಹಲಸಿನ ಸಸಿಗಳು ಮಾರಾಟವಾಗಿವೆ. ಐದು ದಿನಗಳಲ್ಲಿ 7 ಸಾವಿರ ಗಿಡಗಳನ್ನು ಖರೀದಿ ಮಾಡಲಾಗಿದೆ. ಪುತ್ತೂರು ಮತ್ತು ತೈಲಾಂಡಿನ ಹಲಸಿನ ಸಸಿಗಳಿಗೆ ತುಂಬಾ ಬೇಡಿಕೆಯಿದೆ ಎಂದು ಮಳಿಗೆಯ ಮಾಲೀಕ ಜಾಕ್ ಅನಿಲ್ ಪುತ್ತೂರು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDepartment of HorticultureHorticultureIIHRKannada News WebsiteLatest News KannadaState Newsಐಐಎಚ್‌ಆರ್ಕರ್ನಾಟಕಬೆಂಗಳೂರುಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

Next Post

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

kalpa News

kalpa News

Next Post
ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL