ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಶ್ರೀ ಸುಜ್ಞಾನೇಂದ್ರತೀರ್ಥ ಆರಾಧನೆ ಪ್ರಯುಕ್ತ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಕಾರ್ಯಕ್ರಮ ನಡೆದವು.
ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿತು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಜನಾರ್ಧನ್ ಮತ್ತು ಅವರ ಮಗ ಮಾಸ್ಟರ್ ಎಲ್.ಎನ್. ದತ್ತಾ (ತಂದೆ -ಮಗ) ಇವರಿಂದ ಸ್ಯಾಕ್ಸೋಫೋನ್ ವಾದನ ಜುಗಲ್ ಬಂದಿ ಜರುಗಿದವು ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post