ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಭಾರತದ ತಂತ್ರಜ್ಞಾನದ ರಾಜಧಾನಿ ಮಾತ್ರವಲ್ಲ, ನಾವೀನ್ಯತೆ, ಸಂಶೋಧನೆ ಮತ್ತು ತಂತ್ರಜ್ಞಾನ-ಚಾಲಿತ ಬೆಳವಣಿಗೆ ಕ್ಷೇತ್ರಗಳಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟ ಕೇಂದ್ರವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ #Priyanka Kharge ತಿಳಿಸಿದರು.
ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಬೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯು ತನ್ನ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಕಾರ್ಯಕ್ರಮದ ಅಡಿ ಏರ್ಪಡಿಸಿದ್ದ ಜಿಐಎ ಮೀಟ್ ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು.

Also read: ಪರಿಸರದ ವಿವಿಧ ಜೀವಿಗಳ ಬಗ್ಗೆ ಅರಿತು ಜನರಲ್ಲಿ ಜಾಗೃತಿ ಮೂಡಿಸಿ: ಸಂತೋಷ್ ಸಾಗರ್
ಕರ್ನಾಟಕದ ಸ್ಥಾನಮಾನವನ್ನು ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಉತ್ತೇಜಿಸುವಲ್ಲಿ ಜಿಐಎ ಪ್ರಮುಖ ಆಧಾರಸ್ತಂಭವಾಗಿದ್ದು, ವಿಶ್ವದಾದ್ಯಂತ 30 ದೇಶಗಳೊಂದಿಗೆ ಪಾಲುದಾರಿಕೆಯನ್ನು ಹೊಂದಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಏಕ್‌ರೂಪ್ ಕೌರ್ ಹೇಳಿದರು.

ಸಭೆಯಲ್ಲಿ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೆಚಿ, ಡೆನ್ಮಾರ್ಕ್ ಕಾನ್ಸುಲ್ ಜನರಲ್ ಎಸ್ಕೆ ರೋಸೆನ್ಬರ್ಗ್, ಇಸ್ರೇಲ್ ಕಾನ್ಸುಲ್ ಜನರಲ್ ಶ್ರೀಮತಿ ಓರ್ಲಿ ವೈಟ್ಜ್‌ಮನ್, ಜಪಾನ್ ಕಾನ್ಸುಲ್ ಜನರಲ್ ನಕಾನೆ ಟ್ಸುಟೊಮು, ಸ್ವಿಟ್ಜರ್ಲೆಂಡ್ ಕಾನ್ಸುಲ್ ಜನರಲ್ ಜೊನಾಸ್ ಬ್ರುನ್ಸ್ವಿಗ್, ಅಮೆರಿಕ ಕಾನ್ಸುಲ್ ಜನರಲ್ ಕ್ರಿಸೋಫರ್ ಹಾಡ್ಜಸ್, ಯುಕೆ ಕಾನ್ಸುಲ್ ಜನರಲ್‌ನ ಉಪ ಮುಖ್ಯಸ್ಥ ಜೇಮ್ಸ್ ಗಾಡ್ಬರ್, ಮತ್ತು ನೆದರ್ಲ್ಯಾಂಡ್ಸ್‌ನ ಡೆಪ್ಯುಟಿ ಕಾನ್ಸುಲ್ ಜನರಲ್ ಶ್ರೀಮತಿ ಅನ್ನಿ ಕ್ರೆಮರ್ಸ್ ಈ ಸಭೆಯಲ್ಲಿ ಪಾಲ್ಗೊಂಡು ಅಭಿವೃದ್ಧಿ ಹೊಂದುತ್ತಿರುವ ಕರ್ನಾಟಕದ ನಾವೀನ್ಯತೆ ಮತ್ತು ಪರಿಸರ ವ್ಯವಸ್ಥೆಯೊಂದಿಗೆ ಆಳವಾದ ಸಂಬಂಧವನ್ನು ಬೆಳೆಸುವ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಭಾಗವಹಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post