ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂಬೈನ ಕ್ರೂಸ್‌ನಲ್ಲಿ ನಡೆದಿರುವ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಸಿಬಿ ಅಧಿಕಾರಿಗಳು ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಇದೀಗ ಬೆಂಗಳೂರು ಲಿಂಕ್ ಇರೋದು ಬಯಲಾಗಿದೆ.
ಎನ್‌ಸಿಬಿ ಅಧಿಕಾರಿಗಳು ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ಅನಿರೀಕ್ಷಿತ ದಾಳಿ ನಡೆಸಿ, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಜೊತೆಗೆ ಡ್ರಗ್ಸ್ ಪೆಡ್ಲರ್‌ಗಳನ್ನೂ ಬಂಧಿಸಲಾಗಿದ್ದು, ಐಶಾರಾಮಿ ಹಡಗಿನಲ್ಲಿ ಸುಮಾರು 1750 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಈ ಪೈಕಿ ಬೆಂಗಳೂರು ಮೂಲದ 200 ಮಂದಿ ಕ್ರೂಸ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ತಿಳಿದುಬಂದಿದೆ.
ಈಗಾಗಲೇ ಎನ್‌ಸಿಬಿ ಅಧಿಕಾರಿಗಳು ಪಾರ್ಟಿಯಲ್ಲಿ ಭಾಗವಹಿಸಿದ್ದವರ ಪಟ್ಟಿಯನ್ನು ಸಿದ್ದ ಮಾಡಿಕೊಂಡಿದ್ದು, ಈ ಪಾರ್ಟಿಯಲ್ಲಿ ಸೆಲೆಬ್ರಿಟಿಗಳ ಮಕ್ಕಳು ಭಾಗಿಯಾಗಿದ್ದಾರಾ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುವಲ್ಲಿ ನಿರತರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post