ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಶ್ರೀಮನ್ ಮೂಲ ರಾಮಚಂದ್ರ ದೇವರ ಸಂಸ್ಥಾನ ಪೂಜೆ ಮತ್ತು ಹನುಮದ್ವ್ರತ ಪೂಜೆಯೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆ ಪೂಜೆ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾ ಮಂಗಳಾರತಿಯನ್ನು ನೆರವೇರಿಸಿದರು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಮತ್ತು ಸಿಬ್ಬಂದಿಗಳು ಭಕ್ತರು ಭಾಗವಹಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















