ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ನ್ನು ನಾಶಪಡಿಸಲಾಗುವುದು ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇದು ಕೋವಿಡ್ ಸಂದರ್ಭ. ಅಧಿವೇಶನ ಬೇಡ ಎಂದು ವಿಷಯ ಸಮೀತಿ ಸ್ಪೀಕರ್ ಗೆ ವರದಿ ಸಲ್ಲಿಸಿದೆ. ಈಗ ಡೆಲ್ಟಾ, ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಪತ್ತೆ ಆಗುತ್ತಿದೆ. ಈಗಿನ ಕೋವಿಡ್ ಸ್ಥಿತಿ ನೋಡಿಕೊಂಡು ಸಿಎಂ ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡಲಾಗುವುದು.
ಬಸವರಾಜ ಬೊಮ್ಮಾಯಿ,
ದೇಶದಲ್ಲಿ ಮೊಟ್ಟ ಮೊದಲ ಬಾರಿ PIT NDPS ಕಾಯಿದೆ ( ಪ್ರಿವೆನಶನ್ ಆಫ್ ಇಲ್ಲಿಸಿಟ್ ಟ್ರಾಫಿಕಿಂಗ್ ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್ ) ಅಡಿ ಡ್ರಗ್ಸ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಕಾಯಿದೆ ಅಡಿ ಪ್ರಕರಣ ದಾಖಲಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಇದು ಒಂದು ರೀತಿ ಗೂಂಡಾ ಕಾಯಿದೆ ಇದ್ದಂತೆ. ಅಷ್ಟು ಬೇಗ ಬೇಲ್ ಸಿಗುವುದಿಲ್ಲ. ವಿದೇಶಿಗರು ಸೇರಿದಂತೆ ಹಲವರನ್ನು ಈ ಕಾಯಿದೆ ಅಡಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಸೆಲೆಬ್ರಿಟಿಗಳ ಡ್ರಗ್ ಪ್ರಕರಣದ ತನಿಖೆ ಮುಗಿದಿದೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಸಚಿವ ಬೊಮ್ಮಾಯಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post