ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಗುರುವಾರ (ಜೂನ್ 12) ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಿರೀಕ್ಷಾ ಮಂಜುನಾಥ್ ಅವರು ನಡೆಸಿಕೊಟ್ಟ ಗಾಯನ ಕಾರ್ಯಕ್ರಮದಲ್ಲಿ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಒಂದೂವರೆ ಗಂಟೆಗಳ ಕಾಲ ಹಾಡಿದರು.
ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ಸರ್ವೋತ್ತಮ ಸಾಥ್ ನೀಡಿದರು ಎಂದು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post