ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ಅ.20ರಂದು ಸಂಜೆ 6ಕ್ಕೆ ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ್‍ಯ ಮಾಡುತ್ತಿರುವ ವಿಎಂಡ್ಲ್ಯೂಎ ವತಿಯಿಂದ ಈ ಸಮಾರಂಭ ಏರ್ಪಡಿಸಿದ್ದು, ಅಂದು ಸಂಜೆ 3ರಿಂದ 5:30ರವರೆಗೆ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದಿಂದ ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.
Also read: ಅ.20ರಂದು ಪೌರಾಣಿಕ ಯಕ್ಷಗಾನ ಪ್ರಸಂಗಗಳ ಪ್ರದರ್ಶನ

ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಾದ ಅಂತಾರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ, ಟಿಟಿಡಿ ಆಡಳಿತ ಮಂಡಳಿಯ ನಿಕಟಪೂರ್‍ವ ಸದಸ್ಯ ಮತ್ತು ಎಸ್‌ವಿಬಿಸಿ ನಿರ್ದೇಶಕ ಡಾ.ಡಿ.ಪಿ. ಅನಂತ , ಸಮಾಜ ಸೇವಕ ವಿದ್ವಾನ್ ಪ್ರಸನ್ನ ಹೆಬ್ಬಣಿ, ವಿಜಯಮಾಲಾ ಟ್ರಸ್ಟ್ ಸಂಸ್ಥಾಪಕಿ ಹರಿಣೀ ಪಗಡಾಲ ರವರುಗಳಿಗೆ ಮತ್ತು ಚಾಮರಾಜಪೇಟೆ ‘ಶ್ರೀಮನ್ಮಾಧ್ವ ಸಂಘ’ಕ್ಕೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿಎಂಡ್ಲ್ಯೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ವೆಂಕೋಬ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post