ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು Bangalore Sub-Urban Train ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ Minister M B Patil ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ.

Also read: ಬೆಳಗಾವಿ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ತರಾಟೆ
ಇಂತಹ ಪ್ರತೀ ಒಂದು ಗರ್ಡರ್ ತಯಾರಿಕೆಗೂ ಎಂ60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಇಂತಹ ತೊಲೆಗಳು ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ಆಸ್ ಸಿಸ್ಟಮ್ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದ್ದು, ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿ, ಗುಣಮಟ್ಟವನ್ನು ಖಾತ್ರಿಪಡಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 
	    	


 Loading ...
 Loading ... 
							



 
                
Discussion about this post