ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ 6 ರಿಂದ 9ನೆಯ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ನಡೆಸಲಾಗುತ್ತಿರುವ ವಿದ್ಯಾಗಮ ಹಾಗೂ ಭೌತಿಕ ತರಗತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳಿಗೆ ಸೂಚಿಸಿದ್ದಾರೆ.

ಇದು ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ. ಇನ್ನು 10ನೇ ತರಗತಿ ಮಕ್ಕಳಿಗೆ ಎಂದಿನಂತೆ ಭೌತಿಕ ತರಗತಿ ಮುಂದುವರೆಯಲಿವೆ. ಆದರೆ, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದ್ದಾರೆ.

ಶಿಕ್ಷಣ ಕಾಯ್ದೆಯ ಅನುಸಾನ 6-9ನೆಯ ತರಗತಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ನಿರ್ದೇಶನಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.








Discussion about this post