ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, #Tree fall on auto ಚಾಲಕ ಪ್ರಾಣ ಕಳೆದುಕೊಂಡಿರುವ ಘಟನೆ ವಿಜಯನಗರದ ಎಂಸಿ ಲೇಔಟ್ ಬಳಿ ನಡೆದಿದೆ.
ಶಿವರುದ್ರಯ್ಯ (49) ಮತಪಟ್ಟವರು ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಲ್ಲಿಗೆ ಹೋಗುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Also read: ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post