ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗುವ ಸಂಭವವಿರುವ ಹಿನ್ನೆಲೆ ಮುಂದಿನ ಕೆಲ ದಿನಗಳವರೆಗೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ #Heavy rain ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ #Bay of Bengal ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಮೊದಲ ವಾಯುಭಾರ ಕುಸಿತದಿಂದ ಡಿ.14 ಮತ್ತು 15ರಂದು ಮಳೆಯಾಗಲಿದೆ. ಹಾಗೂ 2ನೇ ವಾಯುಭಾರ ಕುಸಿತ ಡಿಸೆಂಬರ್ 16ಕ್ಕೆ ಸಂಭವಿಸಲಿದ್ದು, ಡಿಸೆಂಬರ್ 17–18ಕ್ಕೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
Also read: ಬಾಣಂತಿಯರ ಸಾವು ಪ್ರಕರಣ | ವರದಿಯನ್ನಾಧರಿಸಿ ಸೂಕ್ತ ಕ್ರಮ | ಸಚಿವ ದಿನೇಶ್ ಗುಂಡೂರಾವ್
ಹವಾಮಾನ ವೈಪರಿತ್ಯದ ಕಾರಣದಿಂದ ಡಿ.9ರ ಸೋಮವಾರ ಬೆಳಿಗ್ಗೆಯಿಂದ, ಶಿವಮೊಗ್ಗ ನಗರ ಹಾಗೂ ತಾಲೂಕಿನ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿದೆ.
ಇತ್ತೀಚೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಚಂಡಮಾರುತದಿಂದ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ತೀವ್ರತೆ ಕಡಿಮೆಯಾದ ನಂತರ, ಮಳೆಯ ಪ್ರಮಾಣವು ಇಳಿಕೆಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗುತ್ತಿದೆ. ಹಾಗೂ ರೈತರ ಆತಂಕಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post