ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM Yadiyurappa ಅವರಿಗೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಿದ್ದು, ನಾಳೆ ದುಬೈನ ಅಲ್ ಸಫಾದಲ್ಲಿರುವ ಜಿಎಸ್ ಎಸ್ ಶಾಲೆಯಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ದುಬೈ ಬಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹವಾಲ್ದಾರ್ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ದುಬೈನಲ್ಲಿರುವ ಕನ್ನಡಿಗರು ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಪ್ರತಿ ವರ್ಷ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಬಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ವರ್ಷ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
Also read: ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 51 ಆರೋಗ್ಯ ಕೇಂದ್ರಗಳ ಆಡಳಿತಾತ್ಮಕ, ಆರ್ಥಿಕ ನಿರ್ವಹಣೆ ಸರ್ಕಾರದ ಸುಪರ್ದಿಗೆ
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post