ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬಸವ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿ ವಚನಗಳ ಮೂಲಕ ಅರಿವು ಮೂಡಿಸಿದ ಮಹಾನ್ ವ್ಯಕ್ತಿ ಬಸವಣ್ಣ. ಶ್ರಮದಿಂದ ಕರ್ತವ್ಯ ನಿರ್ವಹಿಸಿ, ಧರ್ಮದ ದಾರಿಯಲ್ಲಿ ಸಾಗಿ ಎನ್ನುವ ಅವರ ಉಪದೇಶದ ಅನುಸಾರ ಸಾರ್ಥಕ ಜೀವನ ನಡೆಸೋಣ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post