ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) BDCC Bank 7.74 ಕೋಟಿ ರೂ. ಲಾಭ ಗಳಿಸುವ ಮೂಲಕ ಸಾಲ ವಿತರಣೆ ಮತ್ತು ಸಾಲ ವಸೂಲಾತಿಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Minister S T Somashekar ಅವರು ಹೇಳಿದರು.
ಚಾಮರಾಜಪೇಟೆಯಲ್ಲಿನ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರ ನಿಗದಿಪಡಿಸಿರುವ ಸಾಲದ ಗುರಿಯನ್ನು ತಲುಪಬೇಕು. ಸಾಲ ವಿತರಣೆಯಲ್ಲಿ ಯಾವುದೇ ತಾರತಮ್ಯ ಮಾಡಬಾರದು. ಅರ್ಹ ರೈತರೆಲ್ಲರಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಯಾಗಬೇಕು ಎಂದರು.

ಸಾಲ ವಿತರಣೆ ಕುರಿತಂತೆ ನಿಗದಿಪಡಿಸಿದ ಗುರಿಯನ್ನು ತಲುಪಬೇಕು. ವಸತಿ, ನಿವೇಶನ ಸಾಲ, ಚಿನ್ನದ ಸಾಲ ಸೇರಿದಂತೆ ಸಹಕಾರ ಸಂಘಗಳಿಗೆ, ಸ್ತ್ರೀಶಕ್ತಿ ಸಂಘಗಳಿಗೆ ಸಾಲ ವಿತರಣೆ ಮತ್ತು ಸಂಘಗಳ ಅಭಿವೃದ್ಧಿಗೆ ಬ್ಯಾಂಕ್ ಮುಂದಾಗಬೇಕು ಎಂದರು.

ಬ್ಯಾಂಕ್ 1768 ಸದಸ್ಯರನ್ನು ಹೊಂದಿದ್ದು61.07 ಕೋಟಿ ರೂ.ಷೇರು ಬಂಡವಾಳವನ್ನು ಹೊಂದಿದೆ. 872.63 ಕೋಟಿ ರೂ. ಠೇವಣಿಗಳನ್ನು ಹೊಂದಿದ್ದು, 1010.01 ಕೋಟಿ ರೂ. ಸಾಲ ಮತ್ತು ಮುಂಗಡಗಳನ್ನು ಹೊಂದಿದೆ. 451 ಸ್ವಸಹಾಯ ಗುಂಪುಗಳಿಗೆ 25.30 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.











Discussion about this post