ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು, ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈ ಬಿಟ್ಟಿಲ್ಲ. ಬಿಡುವುದೂ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ B Y Vijayendra ಮನವಿ ಮಾಡಿದ್ದಾರೆ.
ಸಂಘದ ಶಿಸ್ತು, ಪಕ್ಷದ ಸಂಘಟನೆ, ಜನಪರ ಹೋರಾಟ ಹಾಗೂ ಸೇವೆಯನ್ನು ನಿಜ ಕಾಯಕವೆಂದು ತಿಳಿದು ಬದುಕಿನ ಹೆಜ್ಜೆಯಿಟ್ಟವರು ತಂದೆ ಯಡಿಯೂರಪ್ಪನವರು. Yadiyurappa ಈ ಕಾರಣಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ಕಲ್ಪಿಸಿದ್ದು ಜನರ ಆಶೀರ್ವಾದ ಹಾಗೂ ಭಾರತೀಯ ಜನತಾ ಪಕ್ಷ. ಅಂತೆಯೇ ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ನನ್ನ ಬೆನ್ನುತಟ್ಟಿ ಬೆಳೆಸುತ್ತಿರುವುದು ಪಕ್ಷ ಮತ್ತು ಪಕ್ಷದ ವರಿಷ್ಠರು. ರಾಜಕೀಯ ಅಧಿಕಾರಗಳು ನಿಂತ ನೀರಲ್ಲ ಅದು ಹರಿಯುವ ನದಿಯ ಹಾಗೆ ಇದನ್ನು ಕಾರ್ಯಕರ್ತರು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿದ್ಧಾರೆ.
ಅನಗತ್ಯ ಟೀಕೆ, ಟಿಪ್ಪಣಿಗಳು, ಉದ್ಯೋಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಆದರಿಂದ ನನ್ನ ವ್ಯಕ್ತಿತ್ವಕ್ಕೆ ಹಾಗೂ ತಂದೆಯವರ ಭಾವನೆಗಳಿಗೆ ಮಸಿ ಬಳಿದಂತಾಗುವುದೇ ಹೊರತು ನಮ್ಮನ್ನು ಬೆಂಬಲಿಸಿದಂತೆ ಆಗುವುದಿಲ್ಲ ಎನ್ನುವುದನ್ನು ಹಿತೈಷಿ ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರೂ ಅರಿಯಬೇಕು ಹಾಗೂ ನಿಮ್ಮೆಲ್ಲರ ಬೆಂಬಲ, ಆಶೀರ್ವಾದ, ಮಾರ್ಗದರ್ಶನ, ಸಹಕಾರಗಳು ಸದಾ ಇರಲಿ ಎಂದು ಕೋರಿದ್ದಾರೆ.
Also read: ಭದ್ರಾವತಿ: ಮೇ 26ರಂದು ಶ್ರೀ ಕಣಿವೆ ಮಾರಮ್ಮನ ಜಾತ್ರೆ ಮತ್ತು ರಥೋತ್ಸವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news











Discussion about this post