ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಕೇಳಿಕೊಂಡಿದ್ದಾರೆ. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಟ್ವೀಟ್ ಮಾಡಿದ್ದಾರೆ.
I am privileged to be a loyal worker of BJP. It is my utmost honour to serve the party with highest standards of ethics & behaviour. I urge everyone to act in accordance with party ethics & not indulge in protests/indiscipline that is disrespectful & embarrassing for the party.
— B.S. Yediyurappa (@BSYBJP) July 21, 2021
ಯಡಿಯೂರಪ್ಪ ರಾಜೀನಾಮೆ ನೀಡುವುದು ಖಾತರಿ ಆಗುತ್ತಿರುವಂತೆಯೇ ಅವರ ಪರವಾಗಿ ಪ್ರಬಲ ಲಾಬಿ ಶುರುವಾಗಿದೆ. ಸ್ವಾಮೀಜಿಗಳು ಯಡಿಯೂರಪ್ಪ ಪರವಾಗಿ ಹೈಕಮಾಂಡ್ ಮೇಲೆ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ. ರಾಜೀನಾಮೆ ನೀಡಬೇಡಿ ಎಂದು ಸಿಎಂ ಮೇಲೆ ಬೆಂಬಲಿಗ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ರಾಜೀನಾಮೆ ನೀಡುವ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದಾರೆ. ಹೈಕಮಾಂಡ್‍ಗೆ ಕೊಟ್ಟ ಮಾತಿನಂತೆ, ಮೋದಿ-ಷಾ ನೀಡಿದ ಸೂಚನೆಯಂತೆ ಬಿಎಸ್‍ವೈ ನಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಉನ್ನತ ಮೂಲಗಳ ಮಾಹಿತಿ ಪ್ರಕಾರ, ಸರ್ಕಾರಕ್ಕೆ 2 ವರ್ಷ ತುಂಬಿದ ದಿನವೇ ಅಂದರೆ ಜುಲೈ 26ರಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಸಿದ್ದಗಂಗಾ ಶ್ರೀಗಳ ನೇತೃತ್ವದ ಸ್ವಾಮೀಜಿಗಳ ನಿಯೋಗದ ಜೊತೆ ಯಡಿಯೂರಪ್ಪ ಮಾತಾಡುತ್ತಾ ರಾಜೀನಾಮೆ ಸುಳಿವು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ವೇದಿಕೆಯೂ ರೆಡಿ ಆಗುತ್ತಿದೆ. ಇನ್ನು ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೈಕಮಾಂಡ್ ಪರವಾಗಿ ವೀಕ್ಷಕರು ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post