ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಬೆಳಗಾವಿ |
ಯುಗಾದಿ ಮತ್ತು ರಂಜಾನ್ ಹಬ್ಬದ #Yugadi and Ramzan ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಹಾಗೂ ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ #Special Express Train ನಡೆಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 06511/06512 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು
ವಿಶೇಷ ಎಕ್ಸ್’ ಪ್ರೆಸ್ ರೈಲು:
ರೈಲು ಸಂಖ್ಯೆ 06511 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 28, 2025 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿAದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.

ರೈಲು ಸಂಖ್ಯೆ 06513/06514 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್‌ಎAವಿಟಿ ಬೆಂಗಳೂರು
Also read: ಬೆಂಗಳೂರು-ಹುಬ್ಬಳ್ಳಿ ವಿಮಾನ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸಚಿವ ಪ್ರಹ್ಲಾದ್ ಜೋಶಿ
ವಿಶೇಷ ಎಕ್ಸ್’ ಪ್ರೆಸ್ ರೈಲು:
ರೈಲು ಸಂಖ್ಯೆ 06513 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 30, 2025 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿAದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ರೈಲು ಸಂಖ್ಯೆ 06514 ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 31, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್’ಎಂವಿಟಿ ಬೆಂಗಳೂರು ತಲುಪಲಿದೆ.

ಈ ವಿಶೇಷ ರೈಲುಗಳು (06511/12 ಮತ್ತು 06513/14) ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್’ಎಂಎಂ ಹಾವೇರಿ, ಎಸ್’ಎಸ್’ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಈ ರೈಲುಗಳಲ್ಲಿ 1-ಫಸ್ಟ್ ಎಸಿ ಕೋಚ್, 2-ಎಸಿ ಟು ಟೈರ್ ಬೋಗಿಗಳು, 5-ಎಸಿ ತ್ರಿ ಟೈರ್ ಬೋಗಿಗಳು, 8-ಸ್ಲೀಪರ್ ಕ್ಲಾಸ್ ಬೋಗಿಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ ಸೈಟ್’ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್’ಗಳನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post