ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯ ಪರಿಣಾಮ ಒಟ್ಟು 128 ಮರಗಳು ಧರೆಗೆ ಉರುಳಿವೆ. ಈ ಪೈಕಿ 118 ಮರಗಳು ಧರೆಗೆ ಬಿದ್ದಿದ್ದರೆ, 128 ಬೃಹತ್ ಕೊಂಬೆಗಳು ತುಂಡಾಗಿವೆ. ಪರಿಣಾಮ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ನಗರದಲ್ಲಿ ಸತತ 1 ಗಂಟೆಗೂ ಅಧಿಕ ಸಮಯ ಮಳೆ ಸುರಿದಿದ್ದು, ಟ್ರಿನಿಟಿ ಮೆಟ್ರೋ ನಿಲ್ದಾಣದ #Metro Station ಬಳಿ ಮರ ತುಂಡಾಗಿ ಟ್ರಾಕ್ ಮೇಲೆ ಬಿದ್ದ ಪರಿಣಾಮ ಎಂಜಿ-ರಸ್ತೆ ಟ್ರಿನಿಟಿವರೆಗಿನ ಮೆಟ್ರೋ ಸಂಚಾರ ರದ್ದುಗೊಂಡಿತ್ತು.

Also read: ಸಚಿವ ನಾಗೇಂದ್ರ ರಾಜೀನಾಮೆ ವಿಚಾರ | ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ
ನಗರದಲ್ಲಿ 103.5 ಎಂಎಂ ಮಳೆ ಸುರಿದಿದ್ದು,ವಿದ್ಯಾಪೀಠದಲ್ಲಿ ಗರಿಷ್ಠ ಅಂದರೆ 86.50 ಎಂಎಂ ಮಳೆ ಕಾಟನ್ ಪೇಟೆಯಲ್ಲಿ 84.50 ಎಂಎಂ, ಹಂಪಿನಗರ, ಹೊರಮಾವು ಪ್ರದೇಶದಲ್ಲಿ 80 ಎಂಎಂ ಕೊಡಿಗೆಹಳ್ಳಿಯಲ್ಲಿ 78.50 ಎಂಎಂ ಮಳೆಯಾಗಿದೆ ಎಂದು ಐಎಂಡಿ ಮಾಹಿತಿ ನೀಡಿದೆ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post