ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಗರದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಘಟನೆ ಹಿನ್ನೆಲೆ:
ಬೆಳಗಿನ ಜಾವ 1:45ರ ಸುಮಾರಿನಲ್ಲಿ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಫುಟ್‌ಪಾತ್ ಹತ್ತಿ ಡಿವೈಡರ್‌ಗೆ ಡಿಕ್ಕಿಯಾಗಿ ಪಕ್ಕದ ಗೋಡೆಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ೬ ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಾಗೂ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹೊಸೂರು ಡಿಎಂಕೆ ಶಾಸಕ ವೈ, ಪ್ರಕಾಶ್ ಪುರ ಕರುಣಾಸಾಗರ್ (28), ಬಿಂದು (28), ಕೇರಳ ಮೂಲದವರಾದ ಅಕ್ಷಯ್ ಗೋಯಲ್, ಇಶಿತಾ (21), ಡಾ. ಧನುಶಾ (21) ಮತ್ತು ಹುಬ್ಬಳ್ಳಿಯ ರೋಹಿತ್ (23) ಮತ್ತು ಹರಿಯಾಣದ ಉತ್ಸವ್ ಮೃತಪಟ್ಟವರು ಎಂದು ತಿಳಿದುಬಂದಿದದ್ದರು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post