ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಮ್ಮ ಮೆಟ್ರೋಗೆ #Metro `ಬಸವಣ್ಣ’ #Basavanna ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ.
ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಬಸವ ಸಂಸ್ಕೃತಿ ಅಭಿಯಾನ-2025’ರ ಸಮಾರೋಪ ಸಮಾರಂಭದಲ್ಲಿಂದು ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ಭಾಷಣ ಮಾಡುವ ವೇಳೆಯೇ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡಲು ಆಗ್ರಹ ಕೇಳಿಬಂದಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಮೆಟ್ರೋ ನಿಲ್ದಾಣಕ್ಕೆ ನಮ್ಮ ಪಾಲು ಜಾಸ್ತಿ ಇರಬಹುದು. ಆದರೆ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡುವುದು ನಮ್ಮ ಕೈಯಲ್ಲಿಲ್ಲ. ಕೇಂದ್ರ ಸರ್ಕಾರಕ್ಕೆ ಇದರ ಶಿಫಾರಸು ಮಾಡುತ್ತೇವೆ. ನಮ್ಮದೇ ಸರ್ಕಾರದ ವ್ಯಾಪ್ತಿಯಲ್ಲಿ ಇದ್ದಿದ್ದರೆ ಈ ಸ್ಥಳದಲ್ಲೇ ಒಪ್ಪಿಗೆ ಕೊಡುತ್ತಿದ್ದೇನೆ ಎಂದರು.
ಮುಂದಿನ ವರ್ಷದ ಒಳಗೆ ಅನುಭವ ಮಂಟಪದ ನಿರ್ಮಾಣ ಪೂರ್ತಿ ಮಾಡ್ತೇವೆ. ವಚನ ವಿವಿ ಮಾಡುವ ಬೇಡಿಕೆ ಕೊಟ್ಟಿದ್ದೀರಿ. ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಮಾಡುತ್ತೇವೆ. ನಾನು ರಾಜಕೀಯದಲ್ಲಿ ಏನು ಮಾತು ಕೊಡುತ್ತೀನೋ, ಆ ಮಾತು ನಡೆಸಿಕೊಡುತ್ತೇನೆ ಎಂದು ಆಶ್ವಾಸನೆ ನೀಡಿದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post