ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಯಲ್ ಚಾಲೆಂಜರ್ಸ್ ಬೆಂಗಳೂರು #RCB ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಜನಸಾಗರವೇ ಆಗಮಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಸದ್ಯದ ಮಾಹಿತಿಯ ಪ್ರಕಾರ 10 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್ ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಲಾಗಿದೆ. 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















